ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸಮಯದಲ್ಲಿ ಗುರುಗಳ ಮಾರ್ಗದರ್ಶನದಲ್ಲಿ ಗುರಿ ಮುಟ್ಟುವ ಕಡೆ ಮನಸ್ಸನ್ನು ಕೇಂದ್ರೀಕರಿಸಿ ಯಶಸ್ವಿಯಾಗಿ ಹೊರಹೊಮ್ಮಬೇಕು. ವಿದ್ಯಾರ್ಥಿಗಳು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಗಿಡ ನೆಡುವ ಮೂಲಕ ಪರಿಸರ ಕಾಳಜಿ ಬೆಳೆಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಸಬಲೀಕರಣವನ್ನು ಸರ್ಕಾರ ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಸೌತ್ ಮಲ್ಟಿಪಲ್ ಅಧ್ಯಕ್ಷ ಕೆ.ಟಿ.ಹನುಮಂತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಹಾಗೂ ನಾಗಮಂಗಲ ಅಲಯನ್ಸ್ ಕ್ಲಬ್ ವತಿಯಿಂದ ನಾಗಮಂಗಲ ತಾಲೂಕಿನ ಚೀಣ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದರು.

ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸಮಯದಲ್ಲಿ ಗುರುಗಳ ಮಾರ್ಗದರ್ಶನದಲ್ಲಿ ಗುರಿ ಮುಟ್ಟುವ ಕಡೆ ಮನಸ್ಸನ್ನು ಕೇಂದ್ರೀಕರಿಸಿ ಯಶಸ್ವಿಯಾಗಿ ಹೊರಹೊಮ್ಮಬೇಕು. ವಿದ್ಯಾರ್ಥಿಗಳು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಗಿಡ ನೆಡುವ ಮೂಲಕ ಪರಿಸರ ಕಾಳಜಿ ಬೆಳೆಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಒಂದನೇ ರಾಜ್ಯಪಾಲ ಅಲೈ.ಕೆ.ಎಸ್.ಚಂದ್ರಶೇಖರ್ ಮಾತನಾಡಿ, ನಮ್ಮ ಅಸೋಸಿಯೇಷನ್ ವತಿಯಿಂದ ಸಾಧ್ಯವಾದಷ್ಟು ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಅತ್ಯುತ್ತಮ ವಿದ್ಯಾಭ್ಯಾಸ ಪಡೆದು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕ ಫಿರೋಜ್ ಪಾಷಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಧನಂಜಯ ದರಸಗುಪ್ಪೆ, ವಲಯಾದಕ್ಷ ಎಸ್.ಎನ್.ಕೃಷ್ಣಪ್ಪ , ಅಧ್ಯಾಪಕರಾದ ಬಸವೇಗೌಡ ಖರಡ್ಯ, ಬಸವರಾಜು, ಉಮಾ, ಶ್ರೀಧರ್, ತೇಜಸ್ವಿನಿ, ಶ್ರುತಿ, ರಿಯಾನಾ, ರುದ್ರೇಶ್, ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸೆ.24ರಂದು ಕಾವ್ಯಸಂಗೀತ ಸಂಭ್ರಮ, ಸನ್ಮಾನ

ಕನ್ನಡಪ್ರಭ ವಾರ್ತೆ ಮಂಡ್ಯಶ್ರೀರಂಜಿನಿ ಕಲಾ ವೇದಿಕೆ, ಹೊಯ್ಸಳ ಕರ್ನಾಟಕ ಸೇವಾ ಟ್ರಸ್ಟ್, ಜೈ ಕರ್ನಾಟಕ ಪರಿಷತ್, ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಇನ್ನಿತರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸೆ.24 ರಂದು ಶ್ರೀವಿದ್ಯಾಗಣಪತಿ ದೇವಾಲಯದ ಹೊಯ್ಸಳ ಸಭಾಂಗಣದಲ್ಲಿ ಎಸ್.ಶಿವರಾಮ ಶಾಸ್ತ್ರಿಗಳ ಸ್ಮರಣಾರ್ಥ ಕಾವ್ಯ ಸಂಗೀತ ಸಂಭ್ರಮ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮ ವನ್ನು ಖ್ಯಾತ ವೈದ್ಯ ಡಾ.ಚಂದ್ರಶೇಖರ್ ಉದ್ಘಾಟಿಸಲಿದ್ದು ಅಧ್ಯಕ್ಷತೆಯನ್ನು ಜೈ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ನಾರಾಯಣ್ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರುಗಳನ್ನು ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ. ಟಿ. ಹನುಮಂತು, ಕರ್ನಾಟಕ ರಕ್ಷಣಾ ವೇದಿಕೆಯ ಮುಖ್ಯಸ್ಥ ಕೆ. ಟಿ. ಶಂಕರೇಗೌಡ, ಎಲ್ಲರೂಳಗೊಂದಾಗು ಮಂಕುತಿಮ್ಮ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಎಂ. ವಿನಯ್ ಕುಮಾರ್, ನಗರ ಕಸಾಪ ಘಟಕದ ಅಧ್ಯಕ್ಷೆ ಸುಜಾತ ಕೃಷ್ಣ ಅಭಿನಂದಿಸುವರು.ಸನ್ಮಾನಿತರು: ತ.ನಾ.ಶಿವಕುಮಾರ್ (ಸಾಹಿತ್ಯ ) ಎಸ್‌.ಕೆ. ಶಿವಪ್ರಕಾಶ್ ಬಾಬು (ಸಮಾಜ ಸೇವೆ) ಎಂ.ಗುರುಪ್ರಸಾದ್ (ಕಾನೂನು ಹೋರಾಟ) ಡಾ.ಆರ್.ಮನೋಹರ್ ( ವೈದ್ಯಕೀಯ ), ಜನಾರ್ಧನ್ ಕೊಂಡ್ಲಿ (ಶಿಕ್ಷಣ, ಕಿರುತೆರೆ) ಶ್ರೀಮತಿ ವೀಣಾ ಮೈಸೂರು (ಶಿಕ್ಷಣ) ಅವರುಗಳನ್ನು ಅಭಿನಂದಿಸಲಾಗುವುದು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಬ್ರಾಹ್ಮಣ ಸಭಾದ ನಿರ್ದೇಶಕ ಜಿ.ವಿ.ನಾಗರಾಜು, ಚಿತ್ರಕೂಟ ಸಂಸ್ಥೆಯ ಅಧ್ಯಕ್ಷ ಅರವಿಂದ್ ಪ್ರಭು, ಗಾಯಕಿ ಡಾ. ಅನುಪಮಾ ವಿವೇಕಾನಂದ, ಹೊಯ್ಸಳ ಕರ್ನಾಟಕ ಸೇವಾ ಟ್ರಸ್ಟ್ ನ ಖಜಾಂಚಿ ಗೋಪಾಲ ಕೃಷ್ಣ ಭಾಗವಹಿಸುವರು.ಸಾಂಸ್ಕೃತಿಕ ಕಾರ್ಯಕ್ರಮ ವಾಗಿ ಗಮಕ ವಾಚನ, ತತ್ವಪದ ಗಾಯನ, ಶಂಕರ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಕೀಬೋರ್ಡ್ ಬೋರ್ಡ್, ಗಿಟಾರ್ ವಾದನ, ಕರೋಕೆ ಗೀತೆಗಳ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ, ವ್ಯವಸ್ಥಾಪಕ ಸಿ.ಪಿ.ವಿದ್ಯಾಶಂಕರ್ ತಿಳಿಸಿದ್ದಾರೆ.