ಸಾರಾಂಶ
ಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ವಾಸವಿರುವ ಸಿದ್ಧಿ ಜನಾಂಗದ ಕಾಲೋನಿಗೆ ಜಿಲ್ಲಾ ಪರಿಶಿಷ್ಟ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಭೇಟಿ ನೀಡಿ ಅವರ ಕುಂದುಕೊರತೆ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.
ಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ವಾಸವಿರುವ ಸಿದ್ಧಿ ಜನಾಂಗದ ಕಾಲೋನಿಗೆ ಜಿಲ್ಲಾ ಪರಿಶಿಷ್ಟ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಭೇಟಿ ನೀಡಿ ಅವರ ಕುಂದುಕೊರತೆ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ಸಿದ್ಧಿ ಕಾಲೋನಿಗೆ ಭೇಟಿ ಸಂದರ್ಭದಲ್ಲಿ ಸಮಾಜದ ಪ್ರಮುಖರು ಸರ್ಕಾರದ ವತಿಯಿಂದ ವಿವಿಧ ಮೂಲ ಸೌಲಭ್ಯಗಳಾದ ಪಕ್ಕಾ ಮನೆ, ಕಾಲೋನಿಗೆ ನೀರಿನ ವ್ಯವಸ್ಥೆ, ವ್ಯವಸಾಯಕ್ಕಾಗಿ ಸರ್ಕಾರದಿಂದ ಭೂಮಿ, ಮಕ್ಕಳಿಗಾಗಿ ಒಳ್ಳೆಯ ಶಿಕ್ಷಣ, ಹಾಸ್ಟೇಲ್ ವ್ಯವಸ್ಥೆ, ಕ್ರೀಡಾ ಹಾಸ್ಟೇಲ್ ಹಾಗೂ ಆಸ್ಪತ್ರೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಮಂಜೂರಾತಿಸಲು ವಿನಂತಿಸಿದರು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಸಮಾಜದ ಪ್ರಮುಖರು ಉಪಸ್ಥಿತರಿದ್ದರು.