ಸಾರಾಂಶ
ಯು.ಎಸ್.ಎ.ಯ ಸ್ಟ್ಯಾನ್ ಫೋಡ್ರ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಮಡಿಕೇರಿಯ ಉಪನ್ಯಾಸಕ ಡಾ.ಜೆ.ಜಿ. ಮಂಜುನಾಥ ಸತತ ನಾಲ್ಕನೇ ಬಾರಿ ಸ್ಥಾನ ಪಡೆದಿರುತ್ತಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ: ಯು.ಎಸ್.ಎ.ಯ ಸ್ಟ್ಯಾನ್ ಫೋಡ್ರ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಮಡಿಕೇರಿಯ ಉಪನ್ಯಾಸಕ ಡಾ.ಜೆ.ಜಿ. ಮಂಜುನಾಥ ಸತತ ನಾಲ್ಕನೇ ಬಾರಿ ಸ್ಥಾನ ಪಡೆದಿರುತ್ತಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ‘ಅನಲೈಟಿಕಲ್ ಮತ್ತು ಎನರ್ಜಿ’ ವಿಷಯಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರಿಗೆ ಈ ಗೌರವ ಸಂದಿದೆ. 2023ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 4509ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 89561 ನೇ ಸ್ಥಾನವನ್ನು ಪಡೆದಿರುತ್ತಾರೆ (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).