ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಹಿಂದುಗಳ ಮೇಲೆ ದೌರ್ಜನ್ಯ ಖಂಡಿಸಿ ರಾಜ್ಯ ಕಾಂಗ್ರೆಸ್ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ನಗರ ಮಂಡಲ ವತಿಯಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಯಿತು.ನಗರದ ಮಾರಿಗುಡಿ ಆವರಣದಿಂದ ಆರಂಭವಾದ ಪಂಜಿನ ಮೆರವಣಿಗೆ ವೀರಭದ್ರಸ್ವಾಮಿ ದೇವಾಲಯ, ಹಳೆ ಮಾರುಕಟ್ಟೆ, ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತದಲ್ಲಿ ಕೆಲಹೊತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ, ಹಿಂದೂ ಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.ಪಂಜಿನ ಮೆರವಣಿಗೆ ನೇತೃತ್ವ ವಹಿಸಿದ್ದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವರಾಜ್ ಮಾತನಾಡಿ, ಮದ್ದೂರಿನಲ್ಲಿ ವಿಜೃಂಭಣೆಯಿಂದ ಗಣೇಶಮೂರ್ತಿ ವಿಸರ್ಜನೆ ವೇಳೆಯಲ್ಲಿ ಕಲ್ಲು ತೂರಾಟ ಒಂದು ಪೂರ್ವ ನಿಯೋಜಿತ ಸಂಚು ಆಗಿದೆ. ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತಿದ್ದ ಹಿಂದೂಗಳ ಮೇಲೆ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆ ಬಳಕೆ ಮಾಡಿಕೊಂಡು ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿ, ಅಮಾಯಕ ಹಿಂದೂಗಳ ಮೇಲೆ ಮೊಕದ್ದಮೆ ಹೂಡಿದೆ. ಇದನ್ನು ನೋಡಿದರೆ ನಾವು ಭಾರತದಲ್ಲಿದ್ದೇವೆ ಅಥವಾ ತಾಲಿಬಾನ್‌ನಲ್ಲಿ ಇದ್ದೇವೆ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದೂಗಳ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ. ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣ ನೋಡಿದ್ದೀರಿ. ನಮಗ ರಕ್ಷಣೆ ಕೊಡುವಂತ ಪೋಲಿಸರ ಮೇಲೆ ದಾಳಿ ನಡೆಸಿದ್ದಾರೆ. ಅಂದ ಮೇಲೆ ಮುಂದಿನ ದಿನಗಳಲ್ಲಿ ನಿಮ್ಮ ಮನೆ ಬಂದು ದಾಳಿ ಮಾಡುವುದರಲ್ಲಿ ಯಾವುದೇ ಅನುಮಾನ ಬೇಡ, ಗಣೇಶ ವಿಸರ್ಜನೆ ವೇಳೆಯಲ್ಲಿ ಕಲ್ಲು ತೂರಾಟ ಮಾಡಿರುವ ಆರೋಪಿಗಳನ್ನು ಬಂಧಿಸಿ ದೇಶದಿಂದ ಗಡಿಪಾರು ಮಾಡಿ ಶಿಕ್ಷೆಗೆ ಗುರಿಪಡಿಸಬೇಕು. ಯಾವುದೇ ಕಾರಣಕ್ಕೂ ಸರ್ಕಾರ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳಬಾರದು. ಹಿಂದೂ ಮೇಲೆ ಹೂಡಿರುವ ಪ್ರಕರಣವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಪಂಜಿನ ಮೆರವಣಿಗೆಯಲ್ಲಿ ನಗರಸಭಾ ಅಧ್ಯಕ್ಷ ಸುರೇಶ್, ಸದಸ್ಯರಾದ ಮನೋಜ್ ಪಟೇಲ್, ಚಂದ್ರಶೇಖರ್, ನಗರಸಭಾ ಮಾಜಿ ಸದಸ್ಯರಾದ ಶಿವಣ್ಣ, ಸುಂದರ್ ರಾಜ್, ಜಿಲ್ಲಾ ಉಪಾಧ್ಯಕ್ಷ ಶಿವು ವಿರಾಟ್, ಮುಖಂಡ ಚಂದ್ರಶೇಖರ್, ಬಿಜೆಪಿ ಮಾಜಿ ಅಧ್ಯಕ್ಷ ನಾರಾಯಣಪ್ರಸಾದ್, ಮಾಜಿ ಚೂಡಾಧ್ಯಕ್ಷ ಬಾಲಸುಬ್ರಹ್ಮಣ್ಯ, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ಉಪಾಧ್ಯಕ್ಷ ಮಹೇಶ್, ನಗರಮಂಡಲ ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಮಹೇಶ್, ರಾಜ್, ಚಂದು, ವೀರೇಂದ್ರ, ಸೋಮವಾರಪೇಟೆ ಗುರುಪ್ರಸಾದ್, ನಾಣಿ, ಸಂತು, ರಘು, ನಾಗೇಶ್, ರಾಜೇಶ್, ರಾಮಸಮುದ್ರ ಶಿವಣ್ಣ, ವೇಣುಗೋಪಾಲ್, ಪರಶಿವಯ್ಯ, ಕೃಷ್ಣಪ್ಪ, ರಮೇಶ್, ಭಾಸ್ಕರ್, ಕುಮಾರ್, ರಾಜೇಂದ್ರ,ಪುನೀತ್, ಪೋಟೋ ಕೃಷ್ಣ, ಮಣಿ ಇತರರು ಭಾಗವಹಿಸಿದ್ದರು.---------11chn14
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಚಾಮರಾಜನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.