ರಾಮನಗರ: ಎಸ್ ಐಆರ್ ರದ್ದುಗೊಳಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ನಗರದಲ್ಲಿ ಶನಿವಾರ ರಾತ್ರಿ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು. ನಗರದ ಕಾಂಗ್ರೆಸ್ ಕಚೇರಿಯಿಂದ ಐಜೂರು ಸರ್ಕಲ್‌ವರೆಗೂ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಚುನಾವಣೆ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು
ರಾಮನಗರ: ಎಸ್ ಐಆರ್ ರದ್ದುಗೊಳಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ನಗರದಲ್ಲಿ ಶನಿವಾರ ರಾತ್ರಿ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು. ನಗರದ ಕಾಂಗ್ರೆಸ್ ಕಚೇರಿಯಿಂದ ಐಜೂರು ಸರ್ಕಲ್‌ವರೆಗೂ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಚುನಾವಣೆ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಅಮರ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಆರ್ಎಸ್ಎಸ್ನ ಮುಖ್ಯಸ್ಥ ಮೋಹನ ಭಾಗವತ್ ಹಾಗೂ ಚುನಾವಣಾ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಸಂವಿಧಾನದ ವಿರುದ್ಧ ದೇಶದ್ರೋಹಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.ಕೇಂದ್ರ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಎಸ್‌ಐಆರ್ ಪ್ರಕ್ರಿಯೆಯು ದೇಶದ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕಿನ ಮೇಲಿನ ವ್ಯವಸ್ಥಿತ ದಾಳಿಯಾಗಿದೆ. ಕೇಂದ್ರ ಸರ್ಕಾರ ಭಾರತದ ಕಾನೂನುಬದ್ಧ ನಾಗರಿಕರ ಮೇಲೆ ಎಸ್‌ಐಆರ್ ಮೂಲಕ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಮಾಡುತ್ತಿರುವ ಕುತಂತ್ರವಾಗಿದೆ. ಎಸ್‌ಐಆರ್ ಅನ್ನು ಸಂಪೂರ್ಣವಾಗಿ ರದ್ದು ಮಾಡಬೇಕು. ಕೇಂದ್ರ ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡಿದ್ದಾರೆ ಎನ್ನಲಾದ ಜ್ಞಾನೇಶ್ ಕುಮಾರ್ ಮೇಲೆ ಕಾನೂನು ಕ್ರಮ ತಗೆದುಕೊಳ್ಳಬೇಕು, ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಆ ಸ್ಥಾನದಿಂದ ವಜಾ ಮಾಡಿ ಬಂಧಿಸಬೇಕು ಎಂದು ಒತ್ತಾಯಿಸಿದರು.
ಮೆರವಣಿಗೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎಂ.ಕೆ. ಫೈರೋಜ್, ರಾಮನಗರ ಟೌನ್ ಅಧ್ಯಕ್ಷ ಪುನೀತ್, ಪ್ರಧಾನ ಕಾರ್ಯದರ್ಶಿ ಸಫಿರ್ ಉಲ್ಲಾ ಖಾನ್, ಆದರ್ಶ, ಅಪ್ಪಾಜಿ, ಸಂಜು, ವಿನೋದ್ ಕುಮಾರ್ ಇತರರಿದ್ದರು.(ಫೋಟೋ ಕ್ಯಾಪ್ಷನ್)
ರಾಮನಗರದಲ್ಲಿ ಎಸ್ ಐಆರ್ ರದ್ದುಗೊಳಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಅಮರ್ ನೇತೃತ್ವದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಶನಿರಾರ ರಾತ್ರಿ ಪಂಜಿನ ಮೆರವಣಿಗೆ ಮಾಡಿ ಪ್ರತಿಭಟನೆ ನಡೆಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎಂ.ಕೆ. ಫೈರೋಜ್ ಇತರರು ಪಾಲ್ಗೊಂಡಿದ್ದರು.