ಪ್ರವಾಸಿ ಮಾರ್ಗದರ್ಶಿಗಳು ವೃತ್ತಿಗೆ ಗೌರವ ನೀಡಬೇಕು: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.

| Published : Feb 20 2024, 01:48 AM IST

ಪ್ರವಾಸಿ ಮಾರ್ಗದರ್ಶಿಗಳು ವೃತ್ತಿಗೆ ಗೌರವ ನೀಡಬೇಕು: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
Share this Article
  • FB
  • TW
  • Linkdin
  • Email

ಸಾರಾಂಶ

ಬಾಗಲಕೋಟೆ: ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ನೀಡಲಾಗುತ್ತಿರುವ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಚಾಲನೆ ನೀಡಿದರು. ಪ್ರವಾಸೋದ್ಯಮವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವ ಮೂಲಕ ಉದ್ಯೋಗ ಸೃಷ್ಟಿಸಿ ಆರ್ಥಿಕ ಸಬಲೀಕರಣಗೊಳಿಸುವ ಉದ್ದೇಶ ಹೊಂದಲಾಗಿದೆ. ಆದ್ದರಿಂದ ಪ್ರವಾಸಿ ಮಾರ್ಗದರ್ಶಿಗಳು ಈ ತರಬೇತಿಯ ಸದುಪಯೋಗ ಪಡಿಸಿಕೊಳ್ಳಬೇಕು. ವೃತ್ತಿಗೆ ಗೌರವ ಕೊಡುವ ಕೆಲಸವಾಗಬೇಕು. ತರಬೇತಿ ಪಡೆಯುವ ಮೂಲಕ ಇಲಾಖೆಗೂ ಒಳ್ಳೆಯ ಹೆಸರು ತರುವ ಕೆಲಸವಾಗಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪ್ರವಾಸೋದ್ಯಮವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವ ಮೂಲಕ ಉದ್ಯೋಗ ಸೃಷ್ಟಿಸಿ ಆರ್ಥಿಕ ಸಬಲೀಕರಣಗೊಳಿಸುವ ಉದ್ದೇಶ ಹೊಂದಲಾಗಿದೆ. ಆದ್ದರಿಂದ ಪ್ರವಾಸಿ ಮಾರ್ಗದರ್ಶಿಗಳು ಈ ತರಬೇತಿಯ ಸದುಪಯೋಗ ಪಡಿಸಿಕೊಳ್ಳಬೇಕು. ಇಲ್ಲಿಯ ಇತಿಹಾಸ ಪರಂಪರೆ ತಿಳಿದುಕೊಳ್ಳಬೇಕು. ವೃತ್ತಿಗೆ ಗೌರವ ಕೊಡುವ ಕೆಲಸವಾಗಬೇಕು. ತರಬೇತಿ ಪಡೆಯುವ ಮೂಲಕ ಇಲಾಖೆಗೂ ಒಳ್ಳೆಯ ಹೆಸರು ತರುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಹೇಳಿದರು.

ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ನೀಡಲಾಗುತ್ತಿರುವ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಚಾಲನೆ ಮಾತನಾಡಿದ ಅವರು, ತರಬೇತಿ ಅವಧಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಆಕರ್ಷಣೆಗಳು, ಟ್ರಾವೆಲ್ಸ್‌ ಎಜೆನ್ಸಿ ಹಾಗೂ ಪ್ರವಾಸ ನಿರ್ವಾಹಕರು, ಆತಿಥ್ಯ ಕ್ಷೇತ್ರ, ಆಂಗ್ಲಭಾಷೆ ಪ್ರೌಢಿಮೆ ಇತ್ಯಾದಿ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಜಿಲ್ಲೆಯಲ್ಲಿರುವ ವಿವಿಧ ಪ್ರವಾಸಿ ಸ್ಥಳಗಳ ಮಾಹಿತಿಯನ್ನು ದೇಶಿ-ವಿದೇಶಿ ಪ್ರವಾಸಿಗರ ಮಾರ್ಗದರ್ಶಿಗಳು ಮಾಹಿತಿ ನೀಡುವುದರಿಂದ ಪ್ರವಾಸೋದ್ಯಮಕ್ಕೆ ಪ್ರಚಾರ ನೀಡಿದಂತಾಗುತ್ತದೆ ಎಂದ ಅವರು, ತರಬೇತಿಯಲ್ಲಿ ಪರಿಶಿಷ್ಟ ಜಾತಿಯ 13 ಹಾಗೂ ಪರಿಶಿಷ್ಟ ಪಂಗಡದ 9 ಸೇರಿ ಒಟ್ಟು 22 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಧನದಲ್ಲಿ ಪ್ರವಾಸಿ ಟ್ಯಾಕ್ಸಿ ವಿತರಿಸಿದ ಪರಿಶಿಷ್ಟ ಜಾತಿಯ 52 ಹಾಗೂ ಪರಿಶಿಷ್ಟ ಪಂಗಡದ 17 ಸೇರಿ ಒಟ್ಟು 69 ಅಬ್ಯರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್. ಹಿತ್ತಲಮನಿ, ಪ್ರವಾಸಿ ಅಧಿಕಾರಿ ರಾಮಚಂದ್ರ, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಮಿಥುನರೆಡ್ಡಿ ಇತರರು ಉಪಸ್ಥಿತರಿದ್ದರು.