ಹಂಪಿಯಲ್ಲಿ ಪ್ರವಾಸಿಗರಿಗೆ ಸಿಗದ ಶುದ್ಧ ಕುಡಿಯುವ ನೀರು!

| Published : Jul 18 2025, 12:45 AM IST

ಹಂಪಿಯಲ್ಲಿ ಪ್ರವಾಸಿಗರಿಗೆ ಸಿಗದ ಶುದ್ಧ ಕುಡಿಯುವ ನೀರು!
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ದೇಶ, ವಿದೇಶಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಹಂಪಿಯಲ್ಲಿ ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ವ್ಯವಸ್ಥೆ ಮಾಡಿದರೂ ನೀರು ಮಾತ್ರ ದೊರೆಯುತ್ತಿಲ್ಲ.

ಕನ್ನಡಪ್ರಭ ರಿಯಾಲಿಟಿ ಚೆಕ್‌ನಲ್ಲಿ ಬಟಾಬಯಲುಕೃಷ್ಣ ಲಮಾಣಿ

ಕನ್ನಡಪ್ರಭ ವಾರ್ತೆ ಹೊಸಪೇಟೆ

ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ದೇಶ, ವಿದೇಶಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಹಂಪಿಯಲ್ಲಿ ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ವ್ಯವಸ್ಥೆ ಮಾಡಿದರೂ ನೀರು ಮಾತ್ರ ದೊರೆಯುತ್ತಿಲ್ಲ. ಕನ್ನಡಪ್ರಭ ರಿಯಾಲಿಟಿ ಚೆಕ್‌ ನಡೆಸಿದ್ದು, ಪ್ರಮುಖ ಸ್ಮಾರಕಗಳ ಬಳಿ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ.

ಹಂಪಿಗೆ ವಾರ್ಷಿಕ 40 ಲಕ್ಷಕ್ಕೂ ಅಧಿಕ ದೇಶಿ ಪ್ರವಾಸಿಗರು, 3 ಲಕ್ಷಕ್ಕೂ ಅಧಿಕ ವಿದೇಶಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಹಂಪಿಯಲ್ಲಿ ಜಿ-20 ಶೃಂಗಸಭೆ ಕೂಡ ನಡೆದಿದೆ. ಇನ್ನು ಪ್ರತಿ ವರ್ಷ ಹಂಪಿ ಉತ್ಸವ ನಡೆಸಲಾಗುತ್ತಿದೆ. ಹೀಗಿದ್ದರೂ ಹಂಪಿಯಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವಲ್ಲಿ ಭಾರತೀಯ ಪುರಾತತ್ವ ಇಲಾಖೆ, ರಾಜ್ಯ ಪುರಾತತ್ವ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಹಂಪಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಮತ್ತು ಪೌರಾಡಳಿತ ಇಲಾಖೆಗಳು ಎಡವಿವೆ.

ಹಂಪಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದೆ. ಸ್ಮಾರಕಗಳ ವೀಕ್ಷಣೆಗೆ ದೇಶದ ಮೂಲೆ ಮೂಲೆಗಳಿಂದ ಹಾಗೂ ವಿಶ್ವದ ವಿವಿಧ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರವಾಸಿಗರು ಒಂದೆಡೆ ಕುಳಿತು ಊಟ ಮಾಡಲು ಕನಿಷ್ಠ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಎಡವಿದ್ದಾರೆ. ಕನ್ನಡಪ್ರಭ ಫೋಟೋಗಳ ಸಮೇತ ವಾಸ್ತವ ಸ್ಥಿತಿಯನ್ನು ತೆರೆದಿಟ್ಟಿದೆ. ಕನ್ನಡಪ್ರಭ ನಡೆಸಿದ ರಿಯಾಲಿಟಿ ಚೆಕ್‌ ವೇಳೆ ಕುಡಿಯುವ ನೀರಿನ ವ್ಯವಸ್ಥೆ ತೋರಿಕೆಗಾಗಿ ಮಾಡಲಾಗಿದೆ ಎಂಬುದು ಬಟಾ ಬಯಲಾಗಿದೆ.