ಪ್ರವಾಸಿ ಸ್ಥಳಗಳು ಅಭಿವೃದ್ಧಿ ಹೊಂದಲು ಅಲ್ಲಿಗೆ ಬರುವ ಪ್ರವಾಸಿಗರನ್ನು ಗೌರವದಿಂದ ಕಾಣಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ರಾಣಿಬೆನ್ನೂರು: ಪ್ರವಾಸಿ ಸ್ಥಳಗಳು ಅಭಿವೃದ್ಧಿ ಹೊಂದಲು ಅಲ್ಲಿಗೆ ಬರುವ ಪ್ರವಾಸಿಗರನ್ನು ಗೌರವದಿಂದ ಕಾಣಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ನಗರದ ಪೋಸ್ಟ್ ಸರ್ಕಲ್ ಬಳಿ ಶನಿವಾರ ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಿಂದ ರಾಣಿಬೆನ್ನೂರು ಪ್ರವಾಸ ಯೋಜನೆಯಡಿ 5 ಜೀಪುಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸುವ ಸಮಾರಂಭದಲ್ಲಿ ಅವರು ಮಾತನಾಡಿದರು.

ತಾಲೂಕನ್ನು ಪ್ರವಾಸೋದ್ಯಮ ಕ್ಷೇತ್ರ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ನಗರದ ದೊಡ್ಡ ಕೆರೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಅಲ್ಲಿ ವಿಜ್ಞಾನ ಪಾರ್ಕ್ ಪ್ರಾರಂಭಿಸಲಾಗುವುದು. ಈಗಾಗಲೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ಗಳನ್ನು ಪ್ರಾರಂಭಿಸಲಾಗಿದೆ. ಹಂತ ಹಂತವಾಗಿ ಡಿಜಿಟಿಲ್ ಗ್ರಂಥಾಲಯಗಳನ್ನು ತೆರೆಯಲಾಗುತ್ತಿದೆ. ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಲಭ್ಯ ನೀಡಲಾಗಿದೆ ಎಂದರು. ಶಿಗ್ಗಾಂವಿ-ಸವಣೂರು ಕ್ಷೇತ್ರದ ಶಾಸಕ ಯಾಸೀರಖಾನ ಪಠಾಣ ಮಾತನಾಡಿದರು. ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ, ಪಿಕೆಕೆ ಇನಿಷಿಯೇಟಿವ್ಸ್ ಅಧ್ಯಕ್ಷೆ ಪೂರ್ಣಿಮಾ ಕೋಳಿವಾಡ, ದರ್ಶನ ಲಮಾಣಿ, ಸಣ್ಣತಮ್ಮಪ್ಪ ಬಾರ್ಕಿ, ಕೃಷ್ಣಪ್ಪ ಕಂಬಳಿ, ಚಂದ್ರಣ್ಣ ಬೇಡರ, ಪುಟ್ಟಪ್ಪ ಮರಿಯಮ್ಮನವರ, ಶಶಿಧರ ಬಸ್ಯೆನಾಯ್ಕ, ಇರ್ಫಾನ ದಿಡಗೂರ, ಶೇರುಖಾನ ಕಾಬೂಲಿ, ಬಸವರಾಜ ಹುಚಗೊಂಡರ, ಚಂಪಕ ಬಿಸಲಹಳ್ಳಿ, ಪ್ರವಾಸೋದ್ಯಮ ಇಲಾಖೆ ಮಲ್ಲಿಕಾರ್ಜುನ, ಚಿನ್ನಿಕಟ್ಟಿ ಮತ್ತಿತರರಿದ್ದರು.