ಸಾರಾಂಶ
ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ಟ್ ಪಂದ್ಟಾವಳಿ ಲೋಗೋ ಬಿಡುಗಡೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಜನವರಿಯಲ್ಲಿ ೩ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ
ಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) 2024 ಜನವರಿ 5, 6, 7ರಂದು 3 ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ ''''''''''''''''ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024'''''''''''''''' ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5 ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆಆಹ್ವಾನಿಸಲಾಯಿತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದ್ದು, ಈಗ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟವನ್ನು ಸಂಘಟಿಸಲಾಗುತ್ತಿದೆ ಎಂಬುವುದನ್ನು ಅವರ ಗಮನಕ್ಕೆ ತರಲಾಯಿತು.ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ. ಕೆ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಪದಾಧಿಕಾರಿಗಳಾದ, ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ ಮತ್ತಿತರರಿದ್ದರು.