ವಿವೇಕಾನಂದ ವಿದ್ಯಾರ್ಥಿ ಪ್ರಫುಲ್‌ ವಿಶ್ವೇಶ್ವರಯ್ಯ ವಿವಿ ಕಬಡ್ಡಿ ತಂಡಕ್ಕೆ ಆಯ್ಕೆ

| Published : Nov 05 2023, 01:16 AM IST

ವಿವೇಕಾನಂದ ವಿದ್ಯಾರ್ಥಿ ಪ್ರಫುಲ್‌ ವಿಶ್ವೇಶ್ವರಯ್ಯ ವಿವಿ ಕಬಡ್ಡಿ ತಂಡಕ್ಕೆ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವೇಶ್ವರಯ್ಯ ವಿವಿ ಕಬಡ್ಡಿ ತಂಡಕ್ಕೆ ವಿವೇಕಾನಂದ ವಿದ್ಯಾರ್ಥಿ ಪ್ರಫುಲ್ಲ್‌ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್‌ ಯು.ಎಸ್‌. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್‌ ಮೆಷಿನ್ ಲರ್ನಿಂಗ್‌ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಎಸ್‌ಐಟಿ ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ

ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನ. ೯ ರಿಂದ ೧೨ರ ವರೆಗೆ ಆಂಧ್ರಪ್ರದೇಶದ ಕಾಕಿನಾಡದ ಜವಾಹರ್‌ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸುರಂಪಲೆಮ್ ಆದಿತ್ಯ ಎಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ದಕ್ಷಿಣ ವಲಯ ಅಂತರ್‌ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ.

ಸತತ ಎರಡನೇ ಬಾರಿ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ.