ತೋವಿನಕೆರೆ ಸರ್ಕಾರಿ ಶಾಳೆ ಇತರೆ ಶಾಲೆಗೆ ಮಾದರಿ: ಗೋಪಾಲಕೃಷ್ಣ

| Published : Feb 16 2024, 01:49 AM IST

ತೋವಿನಕೆರೆ ಸರ್ಕಾರಿ ಶಾಳೆ ಇತರೆ ಶಾಲೆಗೆ ಮಾದರಿ: ಗೋಪಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಅದ್ಯತೆ ಹಾಗೂ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ತೋವಿನಕೆರೆ ಸರ್ಕಾರಿ ಶಾಲೆಯ ಶಿಕ್ಷಕರ ಶ್ರಮ ಶ್ಲಾಘನೀಯ ಹಾಗೂ ಇನ್ನಿತರ ಸರ್ಕಾರಿ ಶಾಲೆಗಳಿಗೆ ಮಾದರಿಯಾಗಿದೆ ಎಂದು ಬೆಂಗಳೂರು ಶಿಕ್ಷಣ ಇಲಾಖೆಯ ಮೌಲ್ಯಂಕನ ಮತ್ತು ಪರೀಕ್ಷಾ ಮಂಡಳಿಯ ನಿರ್ದೇಶಕ ಗೋಪಾಲಕೃಷ್ಣ ಮೆಚ್ಚುಗೆ ವ್ಯಕ್ತ ಪಡಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ತಾಲೂಕಿನ ತೋವಿನಕೆರೆ ಸರ್ಕಾರಿ ಮಾದರಿ ಪ್ರಾರ್ಥಮಿಕ ಪಿ.ಎಂ.ಸಿ. ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಮ್ಮಿಯಾಗುತ್ತಿದೆ. ಆದರೆ ಖಾಸಗಿ ಶಾಲೆಗೆ ಸೆಡ್ಡುಹೊಡೆದು ಸರ್ಕಾರಿ ಶಾಲೆಯಲ್ಲಿ 300 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವುದು ಹಾಗೂ ಶಾಲೆ ಉತ್ತಮ ರೀತಿಯಲ್ಲಿ ನಡೆಸುತ್ತಿರುವುದು ಶ್ಲಾಘನೀಯ. ಈ ಶಾಲೆಯ ಶಿಕ್ಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುತ್ತಿರುವುದೇ ಕಾರಣವಾಗಿದ್ದು, ಶಿಕ್ಷಕರು ಮಕ್ಕಳಿಗೆ ಸರಿಯಾದ ಶಿಕ್ಷಣವನ್ನು ಕೊಡಿ ಎಂದು ಶಾಲೆಯ ಶಿಕ್ಷಕರಿಗೆ ಕಿವಿ ಮಾತು ಹೇಳಿದರು..

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ. ನಟರಾಜು ಮಾತನಾಡಿದರು. ಕಾರ್ಯಕ್ರಮದಲ್ಲಿ ಪಠ್ಯೇತರ ದೈಹಿಕ ಚಟುವಟಿಕೆಗಳೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಶಾಲಾ ಆವರಣದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ್ದರು. ಕಾರ್ಯಕ್ರಮದಲ್ಲಿ ತುಮಕೂರು ಡಯೆಟ್‌ನ ಉಪನ್ಯಾಸಕ ರಂಗಯ್ಯ, ಶಾಲೆಯ ಮುಖ್ಯಶಿಕ್ಷಕ ಸಿದ್ದಪ್ಪ, ಸಿ.ಆರ್‌.ಪಿ. ಹರ್ಷ, ಎಸ್.ಡಿ.ಎಂ.ಸಿ. ಅಧ್ಯಕ್ಷ ರೇವಣ್‌ಮೂರ್ತಿ, ಉಪಾಧ್ಯಕ್ಷೆ ಪುಪ್ಪ, ಶಿಕ್ಷಕರಾದ ರಂಗನಾಥ್, ಶಿವಣ್ಣ, ಜಿ. ಶೈಲಾ, ನಾಗವೇಣಿ, ರತ್ನಾದೇವಿ, ಲೇಪಾಕ್ಷಿ ಇಂದುಮತಿ, ರಮ್ಯಾ ಸೇರಿದಂತೆ ಪೋಷಕರು ಹಾಜರಿದ್ದರು.