ಸಾರಾಂಶ
6 ಮಂದಿ ಪಾರು. ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿನ ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ.
ಕನ್ನಡಪ್ರಭ ವಾರ್ತೆ ಬೀದರ್
ಜಿಲ್ಲೆಯ ಹುಮನಾಬಾದ್ ಪಟ್ಟಣ ಹೊರವಲಯದ ಕೈಗಾರಿಕಾ ಕೇಂದ್ರದಲ್ಲಿನ ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ರಾತ್ರಿ ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.ಕಾರ್ಖಾನೆಯಲ್ಲಿ ಭಾನುವಾರ ರಾತ್ರಿ 10ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ರಾಸಾಯನಿಕ ತಯಾರಿಕೆಯ ಸಂದರ್ಭದಲ್ಲಿ ಉಪಸ್ಥಿತರಿದ್ದ 8 ಜನರ ಪೈಕಿ ಇಬ್ಬರು ಸೋರಿಕೆಯಾದ ರಾಸಾಯನಿಕ ಅನಿಲ ಸೇವನೆಯಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಕ್ಷಣವೇ ಅನಿಲ ಸೋರಿಕೆ ಅರಿತು ಹೊರಗೆ ಓಡಿ ಬಂದ ಇತರ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ.
ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದಾಗಿ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ವಡ್ಡನಕೇರಾ ಗ್ರಾಮದ ಮಹ್ಮದ್ ಶಾದಾಬ್ ಕುತುಬೋದ್ದೀನ್ (21) ಹಾಗೂ ಮಧ್ಯಪ್ರದೇಶ ಮೂಲದ ಇಂದ್ರಜಿತ್ (23) ಮೃತಪಟ್ಟಿದ್ದಾರೆ.ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್ ಅವರ ಸೂಚನೆಯಂತೆ ಕಾರ್ಖಾನೆಯ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಹಾಗೂ ಡಿಎಸ್‌ಪಿ ಜೆಎಸ್ ನ್ಯಾಮೇಗೌಡರ್ ಹಾಗೂ ಸಿಪಿಐ ಗುರುಲಿಂಗಪ್ಪ ಗೌಡ ಪಾಟೀಲ್, ಪಿಎಸ್‌ಐ ತಿಮ್ಮಯ್ಯ ಅವರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲಿಸಿ ಸಂಬಂಧಿತರನ್ನು ವಿಚಾರಣೆಗೆ ಒಳಪಡಿಸಿ, ಘಟಕದ ಕಾರ್ಯ ಸ್ಥಗಿತಗೊಳಿಸುವ ಕಾರ್ಯ ನಡೆಸಿದ್ದಾರೆ ಎಂದು. ಆಸ್ಪತ್ರೆಗೆ ಭೀಮರಾವ್ ಪಾಟೀಲ್ ಭೇಟಿ, ಸಾಂತ್ವನ
ಇನ್ನು ಮೃತರ ದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದ್ದು ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.