ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನೀಡಲಾಗುವ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಗೆ ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಆಯ್ಕೆಯಾಗಿದ್ದಾರೆ. ಮೈಸೂರಿನ ದಿ ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ ಸಭಾಂಗಣದಲ್ಲಿ 30ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನೀಡಲಾಗುವ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಗೆ ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಆಯ್ಕೆಯಾಗಿದ್ದಾರೆ.

ಮೈಸೂರಿನ ದಿ ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ ಸಭಾಂಗಣದಲ್ಲಿ 30ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಅವರು ಸಂಪಾದಿಸಿರುವ ‘ಅರಸು ಚುಟುಕು ಸ್ಪರ್ಶಗಳು’ ಕೃತಿ ಬಿಡುಗಡೆ ಮತ್ತು ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟಿ.ಪಿ.ರಮೇಶ್ ಸೇರಿದಂತೆ ಸಪ್ತ ಮಹಾಕಾವ್ಯಗಳ ಕರ್ತೃ, ಕವಯತ್ರಿ ಡಾ.ಲತಾ ರಾಜಶೇಖರ್, ಔಷಧ್ ಗ್ರೂಪ್ ಆಫ್ ಫಾರ್ಮಾಸಿಸ್ ನ ವ್ಯವಸ್ಥಾಪಕ ನಿರ್ದೇಶಕ ಚಂದ್ರಗುಪ್ತ ವಿ.ಜೈನ್, ವಾಸವಿ ಪ್ರಕಾಶನದ ನಿರ್ದೇಶಕ ರಾಮನಾಥ ಗುಪ್ತ, ಅಂಚೆ ಕಚೇರಿಯ ನಿವೃತ್ತ ಹಿರಿಯ ಸೂಪರಿಡೆಂಟೆಂಡ್ ಕೆ.ಓಬಯ್ಯ ಹಾಗೂ ಪ್ರಗತಿಪರ ರೈತ ಪ್ರಕಾಶ್ ರಾಜೇ ಅರಸ್ ಅವರನ್ನು ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಲಿದ್ದು, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಅವರು ದೇವರಾಜ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಕೃತಿ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸ್ವಚ್ಛ ಭಾರತ ರೂವಾರಿ ಎಚ್.ವಿ.ರಾಜೀವ ಅವರು ಪುಸ್ತಕ ತಾಂಬೂಲ ವಿತರಣೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಹಣಕಾಸು ಮಂತ್ರಿ ಎಂ.ಶಿವಣ್ಣ ಹಾಗೂ ಅರಸು ಜಾಗೃತಿ ಅಕಾಡೆಮಿ ಚಾರಿಟಬಲ್ ಟ್ರಸ್ ನ ಉಪಾಧ್ಯಕ್ಷ ಹೆಚ್.ಎ.ವೆಂಕಟೇಶ್ ಪಾಲ್ಗೊಳ್ಳಲಿದ್ದಾರೆ.