ಹಳೆ ವಿದ್ಯಾರ್ಥಿಗಳಿಂದ ಟ್ರ್ಯಾಕ್ ಸೂಟ್ ವಿತರಣೆ

| Published : Nov 17 2025, 02:00 AM IST

ಸಾರಾಂಶ

ಕಕ್ಕಬ್ಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳಿಂದ ಟ್ರ್ಯಾಕ್‌ ಸೂಟ್‌ಗಳನ್ನು ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳಿಂದ ಟ್ರ್ಯಾಕ್ ಸೂಟ್ ಗಳನ್ನು ವಿತರಿಸಲಾಯಿತು.

ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಕೊಡಗು ಕೆಡಿಪಿ ಸದಸ್ಯ ಐನಮಂಡ ರೈನ ಕಾರ್ಯಪ್ಪ , ಹಳೆ ವಿದ್ಯಾರ್ಥಿಗಳಾದ ಬಡಕಡ ಸುರೇಶ್ ಬೆಳ್ಳಿಯಪ್ಪ ಮಾಜಿ ಸೈನಿಕ ಅಂಜಪರವಂಡ ಸಚಿನ್ ಅಯ್ಯಪ್ಪ ಹಾಗೂ ಅಂಜಪರವಂಡ ಕವಿತ ಕಾರ್ಯಪ್ಪ ಎಸಿಪಿ ಬೆಂಗಳೂರು ಇವರು ಟ್ರ್ಯಾಕ್ ಸೂಟ್ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಬಡಕಡ ಸುರೇಶ್ ಬೆಳ್ಳಿಯಪ್ಪ ಅವರು ಮಾತನಾಡಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಜೊತೆಗೆ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು ಎಂದ ಅವರು ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ ಹಲವು ಉದಾಹರಣೆಗಳಿವೆ. ಈ ಶಾಲೆಯು ಸಹ ಅಭಿವೃದ್ಧಿ ಪಥದೆಡೆಗೆ ಸಾಗಬೇಕು ಎಂದರು. ದಾನಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಶಿಕ್ಷಕರಾದ ಸಾಜಿದಾ ಪಿ

ಎಚ್, ಮಮತಾ ಎಂ ಎ, ಆಶಿಕಾ ಕೆ ಎ ಉಪಸ್ಥಿತರಿದ್ದರು. ಒಟ್ಟು 42 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್‌ಗಳನ್ನು ವಿತರಿಸಲಾಯಿತು.