ಸಾರಾಂಶ
ಕ್ರಷರ್ ಮಾಲೀಕರು ಸಮರ್ಪಕ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇಲೂರು: ತಾಲೂಕಿನ ಹಕ್ಕಿಹಳ್ಳಿ ಸಮೀಪದ ಸಿಲ್ವರ್ ಸ್ಯಾಂಡ್ ಕ್ರಷರ್ ಗೆ ಹೋಗುವ ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಲ್ಲಾಪುರ ಗ್ರಾಮದ 24 ವರ್ಷದ ಸಂಜು ಮೃತ ದುರ್ದೈವಿ, ಕ್ರಷರ್ ನಿಂದ ಜಲ್ಲಿಕಲ್ಲು ತುಂಬಿಕೊಂಡು ಬರುವಾಗ ರಸ್ತೆ ವ್ಯವಸ್ಥೆ ಸರಿಯಿಲ್ಲದ ಕಾರಣ ಟ್ರ್ಯಾಕ್ಟರ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಸಂಜು ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಕ್ರಷರ್ ಮಾಲೀಕರು ಸಮರ್ಪಕ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))