ಕೃಷ್ಣಾ ಪ್ರವಾಹಕ್ಕೆ ಟ್ರ್ಯಾಕ್ಟರ್‌ ಪಲ್ಟಿ, ನಾಲ್ವರ ರಕ್ಷಣೆ, ಇಬ್ಬರು ನಾಪತ್ತೆ

| Published : Aug 03 2024, 12:38 AM IST

ಕೃಷ್ಣಾ ಪ್ರವಾಹಕ್ಕೆ ಟ್ರ್ಯಾಕ್ಟರ್‌ ಪಲ್ಟಿ, ನಾಲ್ವರ ರಕ್ಷಣೆ, ಇಬ್ಬರು ನಾಪತ್ತೆ
Share this Article
  • FB
  • TW
  • Linkdin
  • Email

ಸಾರಾಂಶ

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಅಕ್ಕಿವಾಟ್-ಬಸ್ತವಾಡ್ ರಸ್ತೆಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ಸುಮಾರು 8 ಜನರ ಪೈಕಿ ಆರು ಜನರ ರಕ್ಷಣೆಯಾಗಿದ್ದು, ಇಬ್ಬರು ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ಶುಕ್ರವಾರ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಇಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರಲ್ಲಿ ಅಕ್ಕಿವಾಟ್ ಜಿಪಂ ಸದಸ್ಯ ಮಾಜಿ ಇಕ್ಬಾಲ್ ಬೈರಾಗದಾರ ಸಹ ಸೇರಿದ್ದಾರೆ ಎನ್ನಲಾಗಿದೆ. ಅಕ್ಕಿವಾಟ್ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮೋಟಾರ್ ಸ್ಟಾರ್ಟ್ ಮಾಡಲು ಅಕ್ಕಿವಾಟ್–ಬಸ್ತವಾಡ್ ರಸ್ತೆಯಿಂದ ತೆರಳುತ್ತಿದ್ದ ವೇಳೆ ಕೃಷ್ಣಾ ನದಿಯಲ್ಲಿ ಉಂಟಾದ ಪ್ರವಾಹದಿಂದ ನೀರಿನ ಹರಿವಿಗೆ ಎಲ್ಲರೂ ಕೊಚ್ಚಿ ಹೋಗಿದ್ದಾರೆ.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ತಾಲೂಕು ಆಡಳಿತ ಯಾಂತ್ರಿಕ ದೋಣಿ ಮೂಲಕ ವಿಪತ್ತು ನಿರ್ವಹಣೆ ಸಿಬ್ಬಂದಿಯ ಸಹಾಯದಿಂದ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಆಗ 8 ಜನರ ಪೈಕಿ ಆರು ಮಂದಿಯನ್ನು ರಕ್ಷಿಸಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಕೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವ ಅಶೀವ್‌ ಹಸನ್‌ ಮುಶ್ರಿಫ್ ಹಾಗೂ ಮಹಾರಾಷ್ಟ್ರದ ಸಂಸದ ಧೈರ್ಯಶೀಲ ಮಾನೆ ಭೇಟಿ ನೀಡಿದ್ದಾರೆ.