ಟ್ರ್ಯಾಕ್ಟರ್ ಪಲ್ಟಿ: ಓರ್ವನ ಸಾವು

| Published : May 24 2024, 12:48 AM IST

ಸಾರಾಂಶ

ಕೊಟ್ಟಿಗೆಹಾರ: ಗೊಬ್ಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಣಕಲ್ ಸಮೀಪದ ಹೊಕ್ಕಳ್ಳಿಯಲ್ಲಿ ಗುರುವಾರ ನಡೆದಿದೆ.

ಕೊಟ್ಟಿಗೆಹಾರ: ಗೊಬ್ಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಣಕಲ್ ಸಮೀಪದ ಹೊಕ್ಕಳ್ಳಿಯಲ್ಲಿ ಗುರುವಾರ ನಡೆದಿದೆ.

ಟ್ರ್ಯಾಕ್ಟರ್ ನಲ್ಲಿದ್ದ ಸತೀಶ (28) ಮೃತಪಟ್ಟ ದುರ್ದೈವಿ.

ಬಣಕಲ್ ನಿಂದ ಸಾರಗೋಡು ಗ್ರಾಮಕ್ಕೆ ಗೊಬ್ಬರ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಕ್ಕಳ್ಳಿ ಬಳಿ ರಸ್ತೆಗೆ ಪಲ್ಟಿಯಾಗಿದೆ. ಪಲ್ಟಿಯ ರಭಸಕ್ಕೆ ಅದರಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೋಟೋ ಫೈಲ್ ನೇಮ್‌ 23 ಕೆಸಿಕೆಎಂ 5ಮೂಡಿಗೆರೆ ತಾಲೂಕಿನ ಹೊಕ್ಕಳ್ಳಿ ಗ್ರಾಮದ ಬಳಿ ಗೊಬ್ಬರ ತುಂಬಿದ್ದ ಟ್ರ್ಯಾಕ್ಟರ್‌ ಪಲ್ಟಿ.