ಕನ್ನಡಪ್ರಭ ವಾರ್ತೆ ಬೈಲಹೊಂಗಲ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ವಾಲ್‌ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಾಲ್‌ನಿಂದ ಬಿಸಿ ಮಳ್ಳಿ ಸೋರಿಕೆಯಾದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 5 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಬುಧವಾರ ಮಧ್ಯಾಹ್ನ ಸಂಭವಿಸಿದೆ.ಜಮಖಂಡಿಯ ಅಕ್ಷಯ್ ಚೋಪಡೆ (45), ನೇಸರಗಿಯ ದೀಪಕ ಮುನವಳ್ಳಿ (31), ಖಾನಾಪೂರ ತಾಲೂಕಿನ ಚಿಕ್ಕಮುನವಳ್ಳಿಯ ಸುದರ್ಶನ ಬನೋಶಿ(25) ಮೃತಪಟ್ಟ ಕಾರ್ಮಿಕರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ವಾಲ್‌ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಾಲ್‌ನಿಂದ ಬಿಸಿ ಮಳ್ಳಿ ಸೋರಿಕೆಯಾದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 5 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಬುಧವಾರ ಮಧ್ಯಾಹ್ನ ಸಂಭವಿಸಿದೆ.ಜಮಖಂಡಿಯ ಅಕ್ಷಯ್ ಚೋಪಡೆ (45), ನೇಸರಗಿಯ ದೀಪಕ ಮುನವಳ್ಳಿ (31), ಖಾನಾಪೂರ ತಾಲೂಕಿನ ಚಿಕ್ಕಮುನವಳ್ಳಿಯ ಸುದರ್ಶನ ಬನೋಶಿ(25) ಮೃತಪಟ್ಟ ಕಾರ್ಮಿಕರು.

ಕಾರ್ಖಾನೆಯ ಕಬ್ಬಿನ ಹಾಲು ಕುದಿಯುವ 40 ಅಡಿ ಎತ್ತರದಲ್ಲಿರುವ ಎವಿಸಿಪಿ ನಂ-1ರ ಕಂಪಾರ್ಟಮೆಂಟ್‌ನ ವಾಲ್‌ ದುರಸ್ತಿ ಕಾರ್ಯ ನಡೆದಿತ್ತು. ಆದರೆ, ವಾಲ್‌ನ ನಟ್ ಬೋಲ್ಟ್ ತೆಗೆದು ದುರಸ್ತಿ ಮಾಡುವಾಗ ಏಕಾಏಕಿ ಬಿಸಿ ಮಳ್ಳಿ ಕಾರ್ಮಿಕರ ಮೈಮೇಲೆ ಬಿದ್ದಿದೆ. ಬಿಸಿ ಮಳ್ಳಿ ಕಾರ್ಮಿಕರ ಮೇಲೆ ಬಿದ್ದು, ಸಂಪೂರ್ಣವಾಗಿ ಕಾರ್ಮಿಕರ ದೇಹ ಸುಟ್ಟು ಹೋಗಿದೆ. ಪರಿಣಾಮ ಕಾರ್ಮಿಕರು ಕಿರಚಾಡಲು ಶುರು ಮಾಡಿದ್ದಾರೆ. ತಕ್ಷಣ ಅಲ್ಲಿದ್ದ ಕಾರ್ಮಿಕರು ಅಧಿಕಾರಿಗಳಿಗೆ ಮಾಹಿತಿ ನೀಡಿ, ಆಂಬ್ಯುಲೆನ್ಸ್ ತರಿಸಿ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ. ಉಳಿದ, 6 ಜನ ಕಾರ್ಮಿಕರು ಗಂಭೀರ ಗಾಯಗೊಂಡು ನರಳಾಡುತ್ತಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಒಟ್ಟು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಎವಿಸಿಪಿ ನಂ-1 ರ ಕಂಪಾರ್ಟಮೆಂಟ್‌ ವಾಲ್‌ ದುರಸ್ತಿ ಮಾಡಲು ಹೋಗಿದ್ದ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27), ಗೋಕಾಕದ ರಾಘವೇಂದ್ರ ಗಿರಿಯಾಳ (35), ಅಥಣಿಯ ಮಂಜು ತೇರದಾಳ(35), ಬೈಲಹೊಂಗಲ ಅರವಳ್ಳಿಯ ಮಂಜು ಕಾಜಗಾರ (28), ಬಾಗಲಕೋಟೆ ಮರೆಗುದ್ದಿಯ ಗುರು ತಮ್ಮಣ್ಣವರ ಗಾಯಾಳುಗಳು ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಮುರಗೋಡ ಪೊಲೀಸ್ ಠಾಣೆಯ ಪಿಐ ಐ.ಎಮ್.ಮಠಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.