ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್‌ ಘಟಕ ನಾಯಕರಿಗೆ ತರಬೇತಿ ಶಿಬಿರ

| Published : Aug 09 2025, 12:04 AM IST

ಸಾರಾಂಶ

ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರಿಗೆ ಒಂದು ದಿನದ ತರಬೇತಿ ಶಿಬಿರ ಇತ್ತೀಚೆಗೆ ಉಡುಪಿಯಲ್ಲಿ ನಡೆಯಿತು.

ಉಡುಪಿ: ಯಾವುದೇ ಕ್ಷೇತ್ರದಲ್ಲಿ ಪರಿಣಾಮಕಾರಿ ತರಬೇತಿಯು ಅಭಿವೃದ್ಧಿಯ ಶಕ್ತಿಯಾಗಿರುತ್ತದೆ. ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ದೃಷ್ಠಿಯಿಂದ ತರಬೇತಿ ಅಗತ್ಯ. ರೆಡ್‌ಕ್ರಾಸ್‌ನಂತಹ ಸೇವಾ ಸಂಸ್ಥೆಗಳಲ್ಲಿ ತರಬೇತಿಯು ಯುವಕರಲ್ಲಿ ಸೇವಾ ಮನೋಭಾವವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ.ಸೋಜನ್ ಕೆ. ಹೇಳಿದ್ದಾರೆ.ಅವರು ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರಿಗೆ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.ಅಧ್ಯಕ್ಷತೆ ವಹಿಸಿದ ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್ ರೆಡ್‌ಕ್ರಾಸ್ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು. ರೆಡ್‌ಕ್ರಾಸ್ ಗೀತೆಯೊಂದಿಗೆ ಸ್ವಯಂಸೇವಕರು ಕಾರ್ಯಕ್ರಮ ಆರಂಭಿಸಿದರು. ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಸ್ತಾವನೆ ಮಾಡಿ ಸ್ವಾಗತಿಸಿದರು. ರೆಡ್‌ಕ್ರಾಸ್ ಸಂಚಾಲಕಿ ಡಾ.ದಿವ್ಯಾ ಎಂ. ಎಸ್. ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಜಯಶ್ರೀ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಚಾರಿತ್ರಿಕ ಜಿನೇವಾ ಒಪ್ಪಂದದ ಮಾಹಿತಿ ನೀಡಲಾಯಿತು. ರೆಡ್‌ಕ್ರಾಸ್ ಸದಸ್ಯ ರಾಘವೇಂದ್ರ ಕರ್ವಾಲು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ರೆಡ್‌ಕ್ರಾಸ್ ಅಂಗಿಗಳನ್ನು ವಿತರಿಸಲಾಯಿತು. ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ೮೦ ಸ್ವಯಂಸೇವಕರು ಶಿಬಿರದಲ್ಲಿ ಭಾಗವಹಿಸಿದ್ದರು.