ಸಾರಾಂಶ
ಕಾಡು ಪ್ರಾಣಿಗಳ ಹಾವಳಿ, ಕಾರ್ಮಿಕ ವೇತನ ತಾರತಮ್ಯ, ಮಧ್ಯವರ್ತಿಗಳ ಹಾವಳಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದಲ್ಲಿ ರೈತರು ಕಠಿಣ ಸಮಸ್ಯೆಯನ್ನು ಎದುರಿಸಬಹುದಾದ ಅಪಾಯವಿದೆ. ಇದಕ್ಕಾಗಿ ಅ.26ರಂದು ಸುಲ್ಕೇರಿ ಶ್ರಿ ರಾಮ ಶಾಲೆಯಲ್ಲಿ ತಾಲೂಕು ಸಮಿತಿ, ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ ಆಯೋಜಿಸಲಾಗಿದೆ.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಕಾಡು ಪ್ರಾಣಿಗಳ ಹಾವಳಿ, ಕಾರ್ಮಿಕ ವೇತನ ತಾರತಮ್ಯ, ಮಧ್ಯವರ್ತಿಗಳ ಹಾವಳಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದಲ್ಲಿ ರೈತರು ಕಠಿಣ ಸಮಸ್ಯೆಯನ್ನು ಎದುರಿಸಬಹುದಾದ ಅಪಾಯವಿದೆ. ಇದಕ್ಕಾಗಿ ಅ.26ರಂದು ಸುಲ್ಕೇರಿ ಶ್ರಿ ರಾಮ ಶಾಲೆಯಲ್ಲಿ ತಾಲೂಕು ಸಮಿತಿ, ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ ಆಯೋಜಿಸಲಾಗಿದೆ ಎಂದು ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಸ್.ಆರ್. ಭಾಸ್ಕರ ಶಿರ್ಲಾಲ್ ಹೇಳಿದರು.ಅವರು ಸೋಮವಾರ ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ, ರಾಜ್ಯಮಟ್ಟದ ಮುಖಂಡರು ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಧಾರ್ಮಿಕ ಮುಖಂಡ ಕಿರಣ್ ಪುಷ್ಪಗಿರಿ, ಸುಲ್ಕೇರಿ ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಸಂಘದ ರಾಜ್ಯಾಧ್ಯಕ್ಷ ಭೀಮಾ ಸೇನಾ ಕೋಕರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ, ದಕ್ಷಿಣ ಅದ್ಯಕ್ಷ ರಮೇಶ್ ರಾಜು, ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ ಮತ್ತು ಸಂಘದ ಜಿಲ್ಲೆಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ಆನೆ ಹಾವಳಿ ಸಮಸ್ಯೆ ಕುರಿತು ಸಂಘ ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ್ದು, ಉತ್ತಮ ಸ್ಪಂದನೆ ನೀಡಿದ್ದಾರೆ. ಇನ್ನಿತರ ಕಾಡುಪ್ರಾಣಿ ಹಾವಳಿ ತಡೆಗೆ ಕ್ರಮಕೈಗೊಳ್ಳಲು ಪ್ರಯತ್ನ, ಕೂಲಿ ಕಾರ್ಮಿಕರನ್ನು ನೀಡುವ ನೆಪದಲ್ಲಿ ಕಮಿಷನ್ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ತಹಸೀಲ್ದಾರ್ ನೇತೃತ್ವದಲ್ಲಿ ಸಮಿತಿ ಮಾಡಬೇಕಾಗಿದೆ. ಈ ಬಗ್ಗೆ ಕೂಡ ಸಂಘ ಪ್ರಯತ್ನಿಸಲಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ತಾಲೂಕು ಸಮಿತಿ ಸದಸ್ಯೆ ಶೀಲಾ ಕೆ ಉಪಸ್ಥಿತರಿದ್ದರು.