ಪಿಎಂ ವಿಶ್ವಕರ್ಮ ಯೋಜನೆ ೬,೭೩೨ ಫಲಾನುಭವಿಗಳಲ್ಲಿ ೪,೮೬೪ ಮಂದಿಗೆ ತರಬೇತಿ: ಕೋಟ

| Published : Jan 17 2025, 12:47 AM IST

ಪಿಎಂ ವಿಶ್ವಕರ್ಮ ಯೋಜನೆ ೬,೭೩೨ ಫಲಾನುಭವಿಗಳಲ್ಲಿ ೪,೮೬೪ ಮಂದಿಗೆ ತರಬೇತಿ: ಕೋಟ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನವನ್ನು ತೀವ್ರಗೊಳಿಸಲು ಮತ್ತು ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಜತಾದ್ರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮಣಿಪಾಲಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನವನ್ನು ತೀವ್ರಗೊಳಿಸಲು ಮತ್ತು ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಜತಾದ್ರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.ಆಯ್ಕೆಯಾದ ೬,೭೩೨ ಫಲಾನುಭವಿಗಳ ಪೈಕಿ ೪,೮೬೪ ಮಂದಿ ತರಬೇತಿ ಪಡೆದಿದ್ದು, ಇನ್ನುಳಿದ ಅರ್ಜಿದಾರರಿಗೆ ತರಬೇತಿ ಕೇಂದ್ರಗಳನ್ನು ಸಮರ್ಪಕಗೊಳಿಸಲು ಮತ್ತು ಪ್ರತಿಯೊಬ್ಬ ತರಬೇತಿ ಪಡೆದ ವ್ಯಕ್ತಿಗಳಿಗೆ ಸಾಲ ಸೌಲಭ್ಯ ಒದಗಿಸಲು ಸಂಸದ ಕೋಟ ಸೂಚನೆ ನೀಡಿದರು.ಟೈಲರಿಂಗ್, ಕ್ಷೌರಿಕರು, ಬುಟ್ಟಿ ತಯಾರಕರು, ಮರಗೆಲಸ ಮಾಡುವವರು, ಚಿನ್ನ ಬೆಳ್ಳಿ ಕೆಲಸಗಾರರು, ಮೇಸ್ತ್ರಿಗಳು, ಮಡಿಕೆ ತಯಾರಕರು, ಶಿಲ್ಪಕಲಾಕಾರರು ಮುಂತಾದ ೧೮ ಸಾಂಪ್ರಾದಾಯಿಕ ಕುಲಕಸುಬುಗಳಿಗೆ ತರಬೇತಿ ನೀಡಿ ಮತ್ತು ಉತ್ತಮ ಗುಣಮಟ್ಟದ ಟೂಲ್ ಕಿಟ್‌ಗಳನ್ನು ಒದಗಿಸಿ, ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಶೀಘ್ರ ಅನುಷ್ಠಾನಕ್ಕೆ ಸಹಕರಿಸಬೇಕೆಂದು ಸಂಸದ ಕೋಟ ಸೂಚಿಸಿದ್ದಾರೆ.ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಹೆಚ್ಚು ಬೆಲೆಯ ಸ್ಟ್ಯಾಂಪ್ ಪೇಪರ್ ವಿರಹಿತಪಡಿಸಬೇಕೆಂದು ಸಂಸದರು ಸಲಹೆ ಇತ್ತರು. ಸುದೀರ್ಘ ಚರ್ಚೆಯ ನಂತರ ಮುಂದಿನ ತಿಂಗಳು ಜಿಲ್ಲಾ ಮಟ್ಟದ ವಿಶ್ವಕರ್ಮ ಫಲಾನುಭವಿಗಳ ಕಾರ್ಯಾಗಾರ ಮತ್ತು ಸಾಲ ಸೌಲಭ್ಯ ವಿತರಿಸಲು ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಕೋಟ ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ರಾವ್, ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು ಸೀತಾರಾಮ ಶೆಟ್ಟಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಹಾಗೂ ಕೇಂದ್ರ ಸರ್ಕಾರದ ವಿಶ್ವಕರ್ಮ ಅನುಷ್ಠಾನ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಶ್ರೀನಿಧಿ ಹೆಗ್ಡೆ ಹಾಗೂ ಸುರೇಂದ್ರ ಪಣಿಯೂರು ಹಾಜರಿದ್ದರು.