ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ತರಬೇತಿ: ವಾಣಿ ಶ್ರೀನಿವಾಸ್

| Published : Oct 31 2025, 01:15 AM IST

ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ತರಬೇತಿ: ವಾಣಿ ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹೊಲಿಗೆ ತರಬೇತಿ ಪಡೆದಿರುವುದು ಸಂತೋಷ ತಂದಿದೆ ಎಂದು ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಹೇಳಿದ್ದಾರೆ.

ತರಬೇತಿ ಪಡೆದ ಮಹಿಳೆಯರಿಗೆ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಣೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹೊಲಿಗೆ ತರಬೇತಿ ಪಡೆದಿರುವುದು ಸಂತೋಷ ತಂದಿದೆ ಎಂದು ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಹೇಳಿದ್ದಾರೆ. ರಂಗೇನಹಳ್ಳಿ ಗ್ರಾಮದಲ್ಲಿ ಸದ್ಗುರು ಜನಸೇವಾ ಫೌಂಡೇಶನ್ ನಿಂದ ರಂಗೇನಹಳ್ಳಿ ತೇಜಸ್ ಹೊಲಿಗೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸದ್ಗುರು ಜನಸೇವಾ ಫೌಂಡೇಶನ್ ಸಮಾಜಮುಖಿಯಾಗಿ ಉತ್ತಮ ಸೇವೆ ಮಾಡುತ್ತಿದೆ. ಇಂತಹ ಸಂಸ್ಥೆಗಳು ಯುವಕರಿಗೆ ಮಾದರಿ ಎಂದು ಹೇಳಿದರು.

ಸದ್ಗುರು ಜನಸೇವಾ ಫೌಂಡೇಶನ್ ಅಧ್ಯಕ್ಷ ಟಿ.ಎನ್. ಜಗದೀಶ ಮಾತನಾಡಿ ನಮ್ಮ ಸಂಸ್ಥೆ ಈ ವರ್ಷದಲ್ಲಿ 70- 80 ಮಹಿಳೆಯರಿಗೆ 4 ತಿಂಗಳ ಕಾಲ ತರಬೇತಿ ನೀಡಿದೆ. ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬಿ ಗಳಾಗಲು ಮತ್ತು ಕುಟುಂಬ ನಿರ್ವಹಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಸಕ್ತಿ ಇರುವ ಮಹಿಳೆಯರಿಗೆ ನಮ್ಮ ಸಂಸ್ಥೆಯಾದ ಸದ್ಗುರು ಜನಸೇವಾ ಫೌಂಡೇಶನ್ ನಿಂದ ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಹಲವು ಕಾರ್ಯಕ್ರಮ ಮಾಡುತ್ತಿದೆ ಎಂದು ತಿಳಿಸಿದರು.ತರಬೇತಿ ನೀಡಿದ ರೂಪ ಮಾತನಾಡಿ ಸಂಸ್ಥೆಯಿಂದ ಮಹಿಳೆಯರಿಗೆ ಸ್ವಾವಲಂಬಿ ಜೀವನ ಕಲ್ಪಿಸಲು ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸದ್ಗುರು ಜನಸೇವಾ ಫೌಂಡೇಶನ್ ಸದಸ್ಯ ಟಿ. ಎಸ್. ದೇವರಾಜ್, ರವಿ ಶಾಂತಿಪುರ, ವಿನೋದ, ಆನಂದ ,ಪಾರ್ವತಮ್ಮ ಭಾಗವಹಿಸಿದ್ದರು.30ಕೆಟಿಆರ್.ಕೆ.6ಃ

ತರೀಕೆರೆ ಸಮೀಪದ ರಂಗೇನಹಳ್ಳಿಯಲ್ಲಿ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಉದ್ಘಾಟಿಸಿದರು. ಸದ್ಗುರು ಜನಸೇವಾ ಫೌಂಡೇಶನ್ ಅಧ್ಯಕ್ಷ ಟಿ.ಎನ್ ಜಗದೀಶ ಮತ್ತಿತರರು ಇದ್ದರು.