ಸಾರಾಂಶ
ಮಹಿಳೆಯರು ಸರ್ಕಾರದ ಯೋಜನೆಗಳು, ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು
ಸಂಡೂರು: ಮಹಿಳೆಯರು ಸರ್ಕಾರದ ಯೋಜನೆಗಳು, ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕಿ ಈ. ಅನ್ನಪೂರ್ಣ ತುಕಾರಾಂ ಅಭಿಪ್ರಾಯಪಟ್ಟರು.
ತಾಲೂಕಿನ ಬನ್ನಿಹಟ್ಟಿ ಗ್ರಾಪಂ ಕಚೇರಿಯ ಸಭಾಂಗಣದಲ್ಲಿ ಜಿಪಂ ಬಳ್ಳಾರಿ, ತಾಪಂ, ಕೆನರಾ ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಕೇಂದ್ರ, ಗ್ರಾಪಂ ಹಾಗೂ ಶ್ರೇಯಾ ಸಂಜೀವಿನಿ ಗ್ರಾಪಂ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನರೇಗಾ ಯೋಜನೆ ಅಡಿ 100 ಮಾನವ ದಿನಗಳ ಪೂರ್ಣಗೊಳಿಸಿದ ಹಾಗೂ ಸಂಜೀವಿನಿ ಸ್ವಸಹಾಯ ಸಂಘಗಳ 35 ಸದಸ್ಯರಿಗೆ ನರೇಗಾ ಉನ್ನತಿ ಯೋಜನೆ ಅಡಿಯಲ್ಲಿ ಹಮ್ಮಿಕೊಂಡಿರುವ ಕೃತಕ ಆಭರಣಗಳ ತಯಾರಿಕೆ ಕುರಿತ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ತಾಪಂ ಇಒ ಎಚ್.ಷಡಾಕ್ಷರಯ್ಯ, ಸಹಾಯಕ ನಿರ್ದೇಶಕ ರೇಣುಕಚಾರ್ಯಸ್ವಾಮಿ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಪಿಡಿಒ, ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕರು, ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
ಸಂಡೂರು ತಾಲೂಕಿನ ಬನ್ನಿಹಟ್ಟಿ ಗ್ರಾಮದಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಹಮ್ಮಿಕೊಂಡಿರುವ ಕೃತಕ ಆಭರಣ ತಯಾರಿಕೆ ಕುರಿತ ತರಬೇತಿ ಕೇಂದ್ರಕ್ಕೆ ಶುಕ್ರವಾರ ಶಾಸಕಿ ಈ.ಅನ್ನಪೂರ್ಣ ತುಕಾರಾಂ ಭೇಟಿಯಾಗಿ ಮಾತನಾಡಿದರು.