ಚುನಾವಣೆಗೆ ನಿಯುಕ್ತಿಗೊಂಡ ಸಿಬ್ಬಂದಿಗೆ ತರಬೇತಿ

| Published : Apr 08 2024, 01:02 AM IST

ಸಾರಾಂಶ

ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೋಕಸಭಾ ಚುನಾವಣೆಗೆ ನಿಯುಕ್ತಿಗೊಂಡಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಮತ್ತು ಮತಗಟ್ಟೆ ಅಧಿಕಾರಿಗಳಿಗೆ ಭಾನುವಾರ ಮೊದಲ ಹಂತದ ತರಬೇತಿ ಆಯೋಜಿಸಲಾಗಿತ್ತು. ನಿಯುಕ್ತಿಗೊಂಡ ಪಿಆರ್‌ಒ, ಎಆರ್‌ಒ ಸಿಬ್ಬಂದಿ ಆಗಮಿಸಿ ಹಾಜರಾತಿಗೆ ಸಹಿ ಮಾಡಿದ ನಂತರ ತಮಗೆ ನಿಗದಿ ಪಡಿಸಿದ ಕೋಣೆಗಳಿಗೆ ತೆರಳಿ ಮಾಸ್ಟರ್ ಟ್ರೇನರ್‌ಗಳಿಂದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳ ಮತ್ತು ಮತಗಟ್ಟಿ ಅಧಿಕಾರಿಗಳ ಕರ್ತವ್ಯಗಳು, ಚುನಾವಣಾ ಆಯೋಗ ನೀಡಿದ ಮಾಹಿತಿಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೋಕಸಭಾ ಚುನಾವಣೆಗೆ ನಿಯುಕ್ತಿಗೊಂಡಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಮತ್ತು ಮತಗಟ್ಟೆ ಅಧಿಕಾರಿಗಳಿಗೆ ಭಾನುವಾರ ಮೊದಲ ಹಂತದ ತರಬೇತಿ ಆಯೋಜಿಸಲಾಗಿತ್ತು. ನಿಯುಕ್ತಿಗೊಂಡ ಪಿಆರ್‌ಒ, ಎಆರ್‌ಒ ಸಿಬ್ಬಂದಿ ಆಗಮಿಸಿ ಹಾಜರಾತಿಗೆ ಸಹಿ ಮಾಡಿದ ನಂತರ ತಮಗೆ ನಿಗದಿ ಪಡಿಸಿದ ಕೋಣೆಗಳಿಗೆ ತೆರಳಿ ಮಾಸ್ಟರ್ ಟ್ರೇನರ್‌ಗಳಿಂದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳ ಮತ್ತು ಮತಗಟ್ಟಿ ಅಧಿಕಾರಿಗಳ ಕರ್ತವ್ಯಗಳು, ಚುನಾವಣಾ ಆಯೋಗ ನೀಡಿದ ಮಾಹಿತಿಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಯಿತು. ಪ್ರೊಜೆಕ್ಟರ್ ಮೂಲಕ, ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕತೆ, ಮಾಸ್ಟರ್ ಟ್ರೇನರ್, ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ಸಹಾಯಕ ಚುನಾವಣಾಧಿಕಾರಿ ಗಂಗಪ್ಪ.ಎಂ, ಪಾರದರ್ಶಕ ಮತದಾನ ನಡೆಯುವಂಯತೆ ಚುನಾವಣೆಗೆ ನಿಯುಕ್ತಿಗೊಂಡ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು. ತರಬೇತಿಯಲ್ಲೇ ತಮಗೆ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಸಿಬ್ಬಂದಿಗೆ ಹೇಳಿದರು.

ಜಿಲ್ಲಾ ತರಬೇತಿ ನೋಡಲ್ ಅಧಿಕಾರಿ ಶಂಕರಗೌಡ ಸೋಮನಾಳ ಭೇಟಿ ನೀಡಿ ವೀಕ್ಷಿಸಿದರು. ಪಿಆರ್‌ಒ,ಎಆರ್‌ಒ ಸೇರಿ ಒಟ್ಟು ೭೩೭ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಇದರಲ್ಲಿ ೧೬ ಸಿಬ್ಬಂದಿ ಗೈರು ಉಳಿದುಕೊಂಡಿದ್ದರು. ಬಸವನಬಾಗೇವಾಡಿ ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ, ನಿಡಗುಂದಿ ತಹಸೀಲ್ದಾರ್‌ ನೀಲಪ್ರಭ, ಕೊಲ್ಹಾರ ತಹಸೀಲ್ದಾರ್‌ ಎಸ್.ಎಸ್. ನಾಯಕಲಮಠ, ಚುನಾವಣಾ ಶಿರಸ್ತೇದಾರ ಮಹೇಶ ಬಳಗಾನೂರ, ವಿಷಯ ನಿರ್ವಾಹಕ ಎಸ್.ಜಿ.ಇಂಗಳೆ, ಆಪರೇಟರ್ ಅನಿಲ ಅವಟಿ, ಕಂದಾಯ ನಿರೀಕ್ಷಕರು, ಉಪ ತಹಸೀಲ್ದಾರ್‌ಗಳು, ಗ್ರಾಮಾಡಳಿತಾಧಿಕಾರಿಗಳು, ಗ್ರಾಮ ಸಹಾಯಕರು, ೨೧ ಸೆಕ್ಟರ್ ಅಧಿಕಾರಿಗಳು, ಮಾಸ್ಟರ್ ಟ್ರೇನರ್ ಗಳು ಇತರರು ಇದ್ದರು.