ಪೌರಕಾರ್ಮಿಕರಿಗೆ ಸ್ವಚ್ಛತೆ ಹಾಗೂ ಡೆಂಘೀ ನಿಯಂತ್ರಣ ಕುರಿತು ತರಬೇತಿಗೆ ಚಾಲನೆ

| Published : May 18 2025, 01:24 AM IST

ಪೌರಕಾರ್ಮಿಕರಿಗೆ ಸ್ವಚ್ಛತೆ ಹಾಗೂ ಡೆಂಘೀ ನಿಯಂತ್ರಣ ಕುರಿತು ತರಬೇತಿಗೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಮನುಷ್ಯರಿಗೆ ಕಚ್ಚುವುದರಿಂದ ಎಚ್ಚರಿಕೆ ವಹಿಸಬೇಕು. ಸ್ವಚ್ಛತೆ ಕಾಪಾಡಬೇಕು. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರಿಗೆ ಸ್ವಚ್ಛತೆ ಹಾಗೂ ಡೆಂಘೀ ನಿಯಂತ್ರಣ ಕುರಿತು ತರಬೇತಿ ನೀಡಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ತರಬೇತಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಡೆಂಘೀ ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆ ಜತೆಗೆ ಪೌರ ಕಾರ್ಮಿಕರ ಸಹಕಾರ ಬಹಳ ಅಗತ್ಯವಾಗಿದೆ ಎಂದರು.

ಡೆಂಘೀ ಜ್ವರವು ವೈರಸ್‌ನಿಂದ ಉಂಟಾಗುವ ಕಾಯಿಲೆ. ಇದು ಸೋಂಕು ಹೊಂದಿದ ಇಂಡೀಸ್ ಈಜಿಪ್ಟಿ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಮನೆಗಳಲ್ಲಿ ಶೇಖರಿಸಿಡುವ ನೀರಿನ ತಾಣಗಳಾದ ಡ್ರಮ್, ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮಡಿಕೆ ಹಾಗೂ ತ್ಯಾಜ್ಯ ವಸ್ತುಗಳಾದ ತೆಂಗಿನ ಚಿಪ್ಪು ಒಡೆದ ಬಾಟಲಿ ಹಾಗೂ ಟೈರ್‌ಗಳಲ್ಲಿ ಶೇಖರವಾಗುವ ಶುದ್ಧ ನೀರಿನಲ್ಲಿ ಸಾಮಾನ್ಯವಾಗಿ ಸಂತಾನಾಭಿವೃದ್ಧಿ ಮಾಡುತ್ತವೆ ಎಂದರು.

ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಮನುಷ್ಯರಿಗೆ ಕಚ್ಚುವುದರಿಂದ ಎಚ್ಚರಿಕೆ ವಹಿಸಬೇಕು. ಸ್ವಚ್ಛತೆ ಕಾಪಾಡಬೇಕು. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು ಎಂದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಪುರಸಭೆ ಸದಸ್ಯರಾದ ಶಿವಕುಮಾರ್, ಸುಧಾಜಯರಾಮ್, ಗೀತಾ ಆರ್ಮುಗಂ, ಆರೋಗ್ಯ ಶಿಕ್ಷಣಾಧಿಕಾರಿ ಎನ್.ಸಿ.ಶಿವಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಿವಕುಮಾರ್, ಪುಟ್ಟಸ್ವಾಮಿ, ಚೈತ್ರ, ಸಿಬ್ಬಂದಿ ರಮೇಶ್, ಮಧು ಸೇರಿದಂತೆ ಹಲವರು ಹಾಜರಿದ್ದರು.