ಕನ್ನಡಪ್ರಭ ವಾರ್ತೆ ಹನೂರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ ರಾಜಕೀಯ ಪಕ್ಷಗಳ ಮತಗಟ್ಟೆ ಮಟ್ಟದ ಏಜೆಂಟ್‌ಗಳಿಗೆ ಎಸ್‌ಐಆರ್ ಮ್ಯಾಪಿಂಗ್ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಸಹಾಯಕ ಮತದಾರರ ನೋಂದಣಾಧಿಕಾರಿ ಚೈತ್ರ ಕೆ. ಮಾತನಾಡಿ, ಮತದಾರರ ಪಟ್ಟಿಯ ನಿಖರತೆ ಕಾಪಾಡುವಲ್ಲಿ ಬಿಎಲ್‌ಎಗಳ ಪಾತ್ರ ಮಹತ್ವದ್ದಾಗಿದೆ. ಮತಗಟ್ಟೆ ವ್ಯಾಪ್ತಿಯ ಮತದಾರರ ವಿವರಗಳ ಪರಿಶೀಲನೆ, ಹೊಸ ಮತದಾರರ ನೋಂದಣಿ, ಸ್ಥಳಾಂತರಗೊಂಡ ಹಾಗೂ ಮೃತಪಟ್ಟ ಮತದಾರರ ಮಾಹಿತಿಯನ್ನು ಸಲ್ಲಿಸುವ ಕುರಿತು ಏಜೆಂಟ್‌ಗಳಿಗೆ ಮಾರ್ಗದರ್ಶನ ನೀಡಲಾಯಿತು.ಚುನಾವಣಾ ಆಯೋಗದ ನಿರ್ದೇಶನಗಳಂತೆ ಎಸ್‌ಐಆರ್ ಕಾರ್ಯವನ್ನು ಪಾರದರ್ಶಕವಾಗಿ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯ ಎಂದು ಹೇಳಿದರು. ತರಬೇತಿಯಲ್ಲಿ ಎಸ್‌ಐಆರ್ ಮ್ಯಾಪಿಂಗ್‌ನ ಕಾರ್ಯವಿಧಾನ ಮತ್ತು ತಾಂತ್ರಿಕ ಅಂಶಗಳ ಕುರಿತು ಮಾಹಿತಿ ನೀಡಿದರು.ಸಭೆಯಲ್ಲಿ ಚುನಾವಣೆ ಶಿರಸ್ತೇದಾರ್ ಸುರೇಖಾ, ಚುನಾವಣಾ ಸಿಬ್ಬಂದಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮತಗಟ್ಟೆ ಮಟ್ಟದ ಏಜೆಂಟ್‌ಗಳು ಭಾಗವಹಿಸಿದ್ದರು.----------

8ಸಿಎಚ್ಎನ್‌14

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ ರಾಜಕೀಯ ಪಕ್ಷಗಳ ಮತಗಟ್ಟೆ ಮಟ್ಟದ ಏಜೆಂಟ್‌ಗಳಿಗೆ ಎಸ್‌ಐಆರ್ ಮ್ಯಾಪಿಂಗ್ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಮತದಾರರ ನೋಂದಣಾಧಿಕಾರಿ ಚೈತ್ರ ಕೆ. ಮಾತನಾಡಿದರು.