ಸಾರಾಂಶ
ಅರಸೀಕೆರೆ ಮತ್ತು ಬಾಣಾವರ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ತೆರವಿಗಾಗಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮತ್ತು ತೆಗೆದು ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ಕೆಲ ರೈಲುಗಳನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
ಬೆಂಗಳೂರು : ಅರಸೀಕೆರೆ ಮತ್ತು ಬಾಣಾವರ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ತೆರವಿಗಾಗಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮತ್ತು ತೆಗೆದು ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ಕೆಲ ರೈಲುಗಳನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
ಮೇ 16 ಮತ್ತು 23ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿ - ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು (17392) ಯಶವಂತಪುರ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಕೆಎಸ್ಆರ್ ಬೆಂಗಳೂರು ಬದಲು ಯಶವಂತಪುರದಲ್ಲಿ ನಿಲುಗಡೆ ಆಗಲಿದೆ.
ಮೇ 17 ಮತ್ತು 24 ರಂದು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಹೊರಡುವ ರೈಲು ಕೆಎಸ್ಆರ್ ಬೆಂಗಳೂರು - ಹೊಸಪೇಟೆ ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ರೈಲು (06243) ಕೆಎಸ್ಆರ್ ಬೆಂಗಳೂರು-ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಂಡಿದೆ. ಈ ರೈಲು ತನ್ನ ನಿಗದಿತ ಸಮಯದಲ್ಲಿ ಕೆಎಸ್ಆರ್ ಬೆಂಗಳೂರಿನ ಬದಲಿಗೆ ಯಶವಂತಪುರ ನಿಲ್ದಾಣದಿಂದ ಹೊರಡಲಿದೆ ಎಂದು ನೈಋತ್ಯ ರೈಲ್ವೇ ಪ್ರಕಟಣೆ ತಿಳಿಸಿದೆ.