ವರ್ಗಾವಣೆ: ಅತ್ತೂರು ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗೆ ಬೀಳ್ಕೊಡುಗೆ

| Published : Jul 11 2025, 11:48 PM IST

ವರ್ಗಾವಣೆ: ಅತ್ತೂರು ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗೆ ಬೀಳ್ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ವರ್ಗಾವಣೆಯಾದ ಅತ್ತೂರು ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ, ಸಂಧ್ಯಾ, ನಾಗವೇಣಿ, ಗೀತಾ, ಅನಿತಾ, ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞೆ ಶಂಕರಿ ಹಾಗೂ ನಿವೃತ್ತಿ ಹೊಂದಿದ ಆಶಾ ಕಾರ್ಯಕರ್ತೆ ಸುಶೀಲಾ, ಹೇಮಲತಾ ಅವರಿಗೆ ಬೀಳ್ಕೊಡುಗೆ ಸಮಾರಂಭ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನ್ಸಿಲಾ ಪತ್ರಾವೋ, ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

------------------

ಆರೋಗ್ಯ ಸಹಾಯಕಿಗೆ ಬೀಳ್ಕೊಡುಗೆ

ಮೂಲ್ಕಿ: ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಹಾಗೂ ಸ್ವಚ್ಛತೆಗೆ ಮಹತ್ವ ನೀಡುವುದರ ಜೊತೆಗೆ ಗ್ರಾಮದ ಜನ ಹಿತರಕ್ಷಣೆಗೆ ಜೀವದ ಹಂಗು ತೊರೆದು ಉತ್ತಮ ಕಾರ್ಯನಿರ್ವಹಿಸಿದ ಆರೋಗ್ಯ ಸಹಾಯಕಿಯರ ಸೇವೆ ಅಭಿನಂದನೀಯ ಎಂದು ಅತಿಕಾರಿಬೆಟ್ಟು ಪಂಚಾಯಿತಿ ಉಪಾಧ್ಯಕ್ಷ ಮನೋಹರ ಕೋಟ್ಯಾನ್ ಹೇಳಿದರು.

ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ವಾಪ್ತಿಯ ಅತಿಕಾರಿಬೆಟ್ಟು ಗ್ರಾಮದಲ್ಲಿ ಸುಮಾರು ಹತ್ತು ವರ್ಷ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿ ಉಡುಪಿಗೆ ವರ್ಗಾವಣೆಗೊಂಡ ಸಿಸ್ಟರ್‌ ನಾಗವೇಣಿ ಅವರನ್ನು ಗ್ರಾಮ ಪಂಚಾಯಿತಿ, ಆಶಾ ಕಾರ್ಯಕರ್ತೆಯರು ಹಾಗೂ ಸಿಎಚ್ಒ ವತಿಯಿಂದ ಜರುಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಈ ಸಂದರ್ಭ ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.