ಸಾರಾಂಶ
ತಾಲೂಕಿನ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕನೂರು ಗ್ರಾಮದಲ್ಲಿ ಶನಿವಾರ ಜನಸಂಪರ್ಕ ಸಭೆ, ಕಳುವಾದ ಸ್ವತ್ತು ವಾರಸುದಾರರಿಗೆ ಹಸ್ತಾಂತರ ಹಾಗೂ ಬೀಟ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾಹಿತಿ ಫಲಕ ಉದ್ಘಾಟನೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೆರವೇರಿಸಿದ್ದಾರೆ.
- ಬೀಟ್ ಅಧಿಕಾರಿಗಳು, ಸಿಬ್ಬಂದಿ ಮಾಹಿತಿ ಫಲಕ ಉದ್ಘಾಟನೆ
- - -ಕನ್ನಡಪ್ರಭ ವಾರ್ತೆ ಹರಿಹರ
ತಾಲೂಕಿನ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕನೂರು ಗ್ರಾಮದಲ್ಲಿ ಶನಿವಾರ ಜನಸಂಪರ್ಕ ಸಭೆ, ಕಳುವಾದ ಸ್ವತ್ತು ವಾರಸುದಾರರಿಗೆ ಹಸ್ತಾಂತರ ಹಾಗೂ ಬೀಟ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾಹಿತಿ ಫಲಕ ಉದ್ಘಾಟನೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೆರವೇರಿಸಿದರು.ಬೀಟ್ ಪದ್ಧತಿಗೆ ಸಂಬಂಧಿಸಿದಂತೆ ಬೀಟ್ ಕರ್ತವ್ಯಕ್ಕೆ ನೇಮಕಗೊಂಡ ಸಿಬ್ಬಂದಿ ಹಾಗೂ ಬೀಟ್ ಉಸ್ತುವಾರಿ ಅಧಿಕಾರಿಗಳ ಹೆಸರು, ಮೊಬೈಲ್ ನಂಬರ್ ಹಾಗೂ ಭಾವಚಿತ್ರವುಳ್ಳ ಫಲಕಗಳನ್ನು ಎಸ್‌ಪಿ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ನಡೆಸಿ, ಸಾರ್ವಜನಿಕರಿಗೆ ಅಪರಾಧಗಳನ್ನು ತಡೆಗಟ್ಟಲು ವಹಿಸಲಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಈ ಹಿಂದೆ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ 3 ರಾಬರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸ್ವತ್ತನ್ನು ಅವುಗಳ ಅರ್ಹ ವಾರಸುದಾರರಿಗೆ ಹಸ್ತಾಂತರಿಸಿದರು.ರಾಬರಿ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಹುಮಾನ ವಿತರಣೆ ಮಾಡಲಾಯಿತು. ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಎಸ್. ಬಸವರಾಜ್, ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ, ಪಿಎಸ್‌ಐ ಪ್ರಭು ಡಿ ಕೆಳಗಿನಮನಿ, ತನಿಖಾ ಪಿಎಸ್‌ಐ ಎಸ್.ಬಿ. ಚಿದಾನಂದಪ್ಪ, ಮಲೇಬೆನ್ನೂರು ಠಾಣೆ ಹಾಗೂ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
- - --19ಎಚ್ಆರ್ ಆರ್ 01, 01ಎ.ಜೆಪಿಜಿ:
ಹರಿಹರ ತಾಲೂಕು ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕನೂರು ಗ್ರಾಮದಲ್ಲಿ ಜನಸಂಪರ್ಕ ಸಭೆ, ಕಳವು ಮಾಲು ವಾರಸುದಾರರಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.