ಶಿಕ್ಷಣದ ಮೂಲಕ ಮಕ್ಕಳ ಜೀವನದಲ್ಲಿ ಪರಿವರ್ತನೆ: ಪ್ರೊ.ಸಿ.ಎಂ.ತ್ಯಾಗರಾಜ್‌

| Published : Jan 08 2025, 12:17 AM IST

ಶಿಕ್ಷಣದ ಮೂಲಕ ಮಕ್ಕಳ ಜೀವನದಲ್ಲಿ ಪರಿವರ್ತನೆ: ಪ್ರೊ.ಸಿ.ಎಂ.ತ್ಯಾಗರಾಜ್‌
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದ ಮೂಲಕ ಸಾಕಷ್ಟು ಪರಿವರ್ತನೆ ಆಗುತ್ತದೆ. ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣ ನೀಡಿದ್ದಲ್ಲಿ ವಿದ್ಯಾರ್ಥಿಗಳ ಜೀವನ ಸಾರ್ಥಕತೆ ಕಾಣಬಹುದು ಎಂದು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಉಪಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದ ಮೂಲಕ ಸಾಕಷ್ಟು ಪರಿವರ್ತನೆ ಆಗುತ್ತದೆ. ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣ ನೀಡಿದ್ದಲ್ಲಿ ವಿದ್ಯಾರ್ಥಿಗಳ ಜೀವನ ಸಾರ್ಥಕತೆ ಕಾಣಬಹುದು ಎಂದು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಉಪಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅವರು ಹೇಳಿದರು.

ಬೆಳಗಾವಿಯ ಭರತೇಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ ಹಾಗೂ ದಿ.ಕೋಮಲಣ್ಣಾ ದೊಡ್ಡಣ್ಣವರ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳ ಸಂಚಾಲಕರು ದೂರದೃಷ್ಟಿ ಇಟ್ಟುಕೊಂಡು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿರುವುದರಿಂದ ಇಂದು ಭರತೇಶ ಶೀಕ್ಷಣ ಸಂಸ್ಥೆ ಇಷ್ಟು ಎತ್ತರಕ್ಕೆ ಬೆಳೆಯಲು ಕಾರಣವಾಗಿದ್ದು, ಈ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಲಿ ಎಂದು ಅವರು ಹಾರೈಸಿದರು.

ಕೆ.ಎಲ್.ಇ.ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಮಹಾಂತೇಶ ಕೌಜಲಗಿ ಅವರು ಮಾತನಾಡಿ, ವಿನಮ್ರ ಹಿನ್ನಲೆಯಿಂದ ಬಂದ ಭರತೇಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು ಯಾವುದೇ ಫಲಾಪೇಕ್ಷೆಯಿಲ್ಲದೆ ಕಾರ್ಯ ನಿರ್ವಹಿಸಿದ ಪರಿಣಾಮ ಇಂದು ಸಮಾಜ ಮತ್ತು ಶೈಕ್ಷಣೀಕ ಕ್ಷೇತ್ರದ ಮೇಲೆ ತನ್ನದೇ ಆದ ವಿಶೆಷ ಪ್ರಭಾವ ಬೀರಿದ್ದು, ಸಂಸ್ಥಾಪಕರು ಕಂಡ ಕನಸು ಇಂದು ನನಸಾಗಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಎ.ಎಂ.ಜಯಶ್ರಿ ಅವರು ಬರೆದಿರುವ ಭರತೇಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ. ಡಾ.ಜಿನದತ್ತ ದೇಸಾಯಿ ಅವರ ಜೀವನ ಚರಿತ್ರೆಯ ಪುಸ್ತಕವನ್ನು ಡಾ. ಬಸವರಾಜ ಜಗಜಂಪಿ ಅವರು ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಭರತೇಶ ಶಿಕ್ಷಣ ಸಂಸ್ಥೆಯ ಬೋದಕ, ಬೋಧಕೇತರ , ಮತ್ತು ಸಹಾಯಕ ಸಿಬ್ಬಂದಿ ವರ್ಗದವರ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಹಾಗೂ ಉನ್ನತ ಹುದ್ದೆ ಅಲಕಂರಿಸಿದ ಮಾಜಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಜ. 17 ಮತ್ತು 18 ರಂದು ಭರತೇಶ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಉಚಿತ ಪ್ಲಾಸ್ಟಿಕ ಸರ್ಜರಿ ಶಿಬಿರ ಮತ್ತು ಜ. 25 ರಂದು ನಡೆಯಲಿರುವ ಶಿವಂ ಮತ್ತು ಸಿದ್ದಾರ್ಥ ಮಹಾದೇವನ ಇವರ ಸಂಗೀತ ಕಾರ್ಯಕ್ರಮದ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.

ಭರತೇಶ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಶ್ರೀಪಾಲ ಖೇಮಲಾಪೂರೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಮಂಡಳಿಯ ಸದಸ್ಯರಾದ ಶಶಾಂಕ ಲೇಂಗಡೆ ಸ್ವಾಗತಿಸಿದರು. ಸಂಜೀವ ದೊಡ್ಡಣ್ಣವರ ವಂದಿಸಿದರು.