ಗ್ರಾಮದ ಸರ್ಕಾರಿ ಶಾಲೆ ಅಂಗನವಾಡಿ ಕಟ್ಟಡ ಅಭಿವೃದ್ಧಿಗೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೆಚ್ಚಿನ ಸಹಕಾರ ನೀಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆಗಳು ಮುಚ್ಚುವ ಹಂತಕ್ಕೆ ಹೋಗಿವೆ. ಈ ಬಗ್ಗೆ ಪ್ರತಿಯೊಬ್ಬರು ಗಮನ ಹರಿಸುವ ಮೂಲಕ ಸರ್ಕಾರಿ ಶಾಲೆ ಉಳಿಸಬೇಕಾಗಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಗ್ರಾಮದ ಕೆಲವು ದಾನಿಗಳು ಮಕ್ಕಳಿಗೆ ನೋಟ್‌ಬುಕ್, ಪೆನ್ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಶೀಲಾ ರಂಗಚಾರಿ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಆಶಾದೇವಿ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದ್ದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ ಭಾರತ ದೇಶ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸಾಲಿನಲ್ಲಿ ಇದ್ದರೂ ಸಹ ಸರ್ಕಾರಗಳು. ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಪಿಸಿದರೆ ಭಾರತ ದೇಶ ಇನ್ನಷ್ಟು ಬಲಿಷ್ಠವಾಗಲು ವಾಗುತ್ತದೆ ಎಂದು ಕೃಷಿ ಪತ್ತಿನ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಹುಲಿಕೆರೆ ಸಂಪತ್ ಕುಮಾರ್‌ ಅಭಿಪ್ರಾಯಪಟ್ಟರು. ಹೋಬಳಿಯ ಹುಲಿಕೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ಜನ ದೇಶದ ಸ್ವಾತಂತ್ರ್ಯಕ್ಕೋಸ್ಕರ ತಮ್ಮ ಜೀವವನ್ನೇ ಮುಣಪಾಗಿಟ್ಟು ಹೋರಾಟ ನಡೆಸಿದರು ಮಹಾತ್ಮ ಗಾಂಧೀಜಿ ಸೇರಿದಂತೆ ಹಲವು ಮಹನೀಯರು ಮುಂದಾಳತ್ವ ವಹಿಸುವ ಮೂಲಕ ದೇಶದ ಜನರನ್ನು ಒಗ್ಗೂಡಿಸುವ ಕೆಲಸ ಮಾಡಿದರು. ಈ ಕಾರಣದಿಂದಲೇ ನಮಗೆ ಸ್ವಾತಂತ್ರ್ಯ ದೊರಕಿತು ಎಂದರು. ಗ್ರಾಮದ ಸರ್ಕಾರಿ ಶಾಲೆ ಅಂಗನವಾಡಿ ಕಟ್ಟಡ ಅಭಿವೃದ್ಧಿಗೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೆಚ್ಚಿನ ಸಹಕಾರ ನೀಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆಗಳು ಮುಚ್ಚುವ ಹಂತಕ್ಕೆ ಹೋಗಿವೆ. ಈ ಬಗ್ಗೆ ಪ್ರತಿಯೊಬ್ಬರು ಗಮನ ಹರಿಸುವ ಮೂಲಕ ಸರ್ಕಾರಿ ಶಾಲೆ ಉಳಿಸಬೇಕಾಗಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಗ್ರಾಮದ ಕೆಲವು ದಾನಿಗಳು ಮಕ್ಕಳಿಗೆ ನೋಟ್‌ಬುಕ್, ಪೆನ್ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಶೀಲಾ ರಂಗಚಾರಿ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಆಶಾದೇವಿ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದ್ದರು.ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಬಸವರಾಜ್, ಅಂಗನವಾಡಿ ಶಿಕ್ಷಕಿ ಯಶೋಧ, ನಿವೃತ್ತ ವಾರ್ಡನ್ ಮಹೇಶ್, ಡೇರಿ ಅಧ್ಯಕ್ಷೆ ನಾಗಮಣಿ ಪ್ರಕಾಶ್, ಗ್ರಾಮದ ಪ್ರಮುಖರಾದ ಬೋರ್ಲಿಂಗೇಗೌಡ, ರಂಗಚಾರಿ, ಗಣೇಶ್, ನಾಗೇಶ್, ದೇವರಾಜ್, ಭಾರತಿ, ಲಕ್ಷ್ಮಮ್ಮ, ನೇತ್ರಾವತಿ, ಧನಲಕ್ಷ್ಮೀ, ಲೀಲಾವತಿ, ಚಂದ್ರಮ್ಮ, ಗಂಗಾವತಿ, ಅಡುಗೆ ಸಹಾಯಕ್ಕೆ ಲೀಲಾವತಿ ಅಂಗನವಾಡಿ ಅಡುಗೆ ಸಹಾಯಕ್ಕೆ ವನಜಾಕ್ಷಿ, ಶಶಿಕಲಾ, ಪಾರ್ವತಮ್ಮ, ತಂಗ್ಯಮ್ಮ, ಭಾಗ್ಯಮ್ಮ, ಅನಿಲ್, ಆಶಾ, ರುಕ್ಮಿಣಿ, ಸೋಮೇಗೌಡ, ರೇಖಾ, ರಾಜೇಗೌಡ, ಗೌರಮ್ಮ, ಶಾರದಮ್ಮ, ಪ್ರಕಾಶ್, ಶೇಖರ್‌, ಕೃಷ್ಣಮೂರ್ತಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.