ನಿಗಮಗಳ ಸಹಾಯ ಧನಕ್ಕೆ ಪಾರದರ್ಶಕ ಆಯ್ಕೆ

| Published : Nov 26 2024, 12:47 AM IST

ಸಾರಾಂಶ

ಚಿತ್ರದುರ್ಗ ಜಿಪಂ ಮಿನಿ ಸಭಾಂಗಣದಲ್ಲಿ ಸೋಮವಾರ ವಿವಿದ ನಿಗಮಗಳ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಜಿಪಂ ಸಿಇಓ ಸೋಮಶೇಖರ್ ಪಾಲ್ಗೊಂಡಿದ್ದರು.

ಕನ್ನಡಪ್ರಭವಾರ್ತೆ, ಚಿತ್ರದುರ್ಗ

ಚಿತ್ರದುರ್ಗ ಜಿಪಂ ಮಿನಿ ಸಭಾಂಗಣದಲ್ಲಿ ಸೋಮವಾರ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿಗೆ 11 ನಿಗಮಗಳಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಯಗಳಡಿ ಸಾಲ, ಸಹಾಯಧನ ಕೋರಿ ಸ್ವೀಕೃತಗೊಂಡ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂಬಂಧ ಆಯ್ಕೆ ಸಮಿತಿ ಸಭೆ ನಡೆಯಿತು.

ಸಭೆಯ ಸಂಪೂರ್ಣ ವಿಡಿಯೋ ಚಿತ್ರಿಕರಿಸಿ, ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ 12 ಗುರಿ ನಿಗದಿಯಾಗಿದ್ದು 36 ಅರ್ಜಿಗಳು ಸ್ವಿಕೃತವಾಗಿದ್ದು, ಇದರಲ್ಲಿ 12 ಫಲಾನುಭವಿಯನ್ನು ಆಯ್ಕೆ ಮಾಡಲಾಯಿತು. ಹಾಗೆಯೇ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೇರ ಸಾಲಕ್ಕೆ ಗುರಿ-24 ನಿಗದಿಯಾಗಿದ್ದು, 31 ಅರ್ಜಿಗಳು ಬಂದಿದ್ದು, ಇದರಲ್ಲಿ 24 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಗುರಿ-19 ನಿಗದಿಯಾಗಿದ್ದು, 237 ಅರ್ಜಿಗಳು ಬಂದಿದ್ದು 19-ಫಲಾನುಭವಿಗಳ ಆಯ್ಕೆ ಮಾಡಲಾಯಿತು. ಶೈಕ್ಷಣಿಕ ನೇರ ಸಾಲಕ್ಕೆ 2 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ 625 ಅರ್ಜಿ ಬಂದಿದ್ದು ಇದರಲ್ಲಿ 10 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೇರ ಸಾಲಕ್ಕೆ 4 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ಗುರಿ-14 ನಿಗದಿಯಾಗಿದ್ದು, 133 ಅರ್ಜಿಗಳು ಬಂದಿದ್ದವು. 14 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ ಗುರಿ-25 ನಿಗದಿಯಾಗದ್ದು, 553 ಅರ್ಜಿಗಳು ಬಂದಿದ್ದು 25-ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಗುರಿ-17 ನಿಗದಿಯಾಗಿದ್ದು, 219 ಅರ್ಜಿಗಳು ಬಂದಿದ್ದವು. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಗುರಿ-27 ನಿಗದಿಯಾಗಿದ್ದು 2718 ಅರ್ಜಿಗಳು ಬಂದಿದ್ದವು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೇರ ಸಾಲಕ್ಕೆ ಗುರಿ-04 ನಿಗದಿಯಾಗಿದ್ದು, 25 ಅರ್ಜಿಗಳು ಬಂದಿದ್ದವು.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಗುರಿ-21 ನಿಗದಿಯಾಗಿದ್ದು, 1420 ಅರ್ಜಿಗಳು ಬಂದಿದ್ದವು. ಇದರಲ್ಲಿ 21 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೇರ ಸಾಲಕ್ಕೆ ಗುರಿ-25 ನಿಗದಿಯಾಗಿದ್ದು, 40 ಅರ್ಜಿಗಳು ಬಂದಿದ್ದವು. ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಗುರಿ-31 ನಿಗದಿಯಾಗಿದ್ದು, 396 ಅರ್ಜಿಗಳು ಬಂದಿದ್ದವು. ಇದರಲ್ಲಿ 31 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೇರ ಸಾಲಕ್ಕೆ ಗುರಿ-10 ನಿಗದಿಯಾಗಿದ್ದು 15 ಅರ್ಜಿಗಳು ಸಲ್ಲಿಕೆಯಾಗಿದ್ದವು. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಗುರಿ-49 ನಿಗದಿಯಾಗಿದ್ದು, 35 ಅರ್ಜಿಗಳು ಬಂದಿದ್ದವು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೇರ ಸಾಲಕ್ಕೆ ಗುರಿ-6 ನಿಗದಿಯಾಗಿದ್ದು, ಇಬ್ಬರು ಅರ್ಜಿ ಸಲ್ಲಿಸಿದ್ದು, ಅರ್ಜಿ ಸಲ್ಲಿಕೆ ಮಾಡಿದ ಇಬ್ಬರು ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಗುರಿ-23 ನಿಗದಿಯಾಗಿದ್ದು, 81 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ 23 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. 2024-25ನೇ ಸಾಲಿಗೆ ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಕೋರಿ ಸ್ವೀಕೃತಗೊಂಡ ಅರ್ಹ ಫಲಾಪೇಕ್ಷಿಗಳಿಗೆ ಕೊಳವೆ ಬಾವಿ ಸೌಲಭ್ಯ ಒದಗಿಸಲು ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಿಲಾಯಿತು. ಮಂಜೂರಾತಿಗಾಗಿ ಆಯ್ಕೆ ಸಮಿತಿಯಿಂದ ಅನುಮೋದನೆ ಪಡೆಯಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯಕ, ಸಹಕಾರ ಸಂಘಗಳ ಉಪನಿಬಂಧಕ ದಿಲೀಪ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪವಿತ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಘೆ ಸೇರಿದಂತೆ ವಿವಿಧ ಇಲಾಖೆಯ ಆಯ್ಕೆ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.