ಅಂಗನವಾಡಿ ಕಾರ್ಯಕರ್ತೆಯರ ಸಂಪೂರ್ಣ ಪಾರದರ್ಶಕ ಆಯ್ಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

| Published : Aug 30 2024, 02:01 AM IST / Updated: Aug 30 2024, 12:02 PM IST

ಅಂಗನವಾಡಿ ಕಾರ್ಯಕರ್ತೆಯರ ಸಂಪೂರ್ಣ ಪಾರದರ್ಶಕ ಆಯ್ಕೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share this Article
  • FB
  • TW
  • Linkdin
  • Email

ಸಾರಾಂಶ

ಅಂಗನವಾಡಿ ಕಾರ್ಯಕರ್ತೆಯರ ನೇಮಕದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

  ಬೆಳಗಾವಿ :  ಅಂಗನವಾಡಿ ಕಾರ್ಯಕರ್ತೆಯರ ನೇಮಕದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ. ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾದೆ, ಅರ್ಹರಿಗಷ್ಟೇ ನೌಕರಿ ನೀಡಲಾಗಿದ್ದು, ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ 35 ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಅದೇಶ ಪತ್ರ ನೀಡಲಾಗಿದ್ದು, ಅನುಕಂಪದ ಆಧಾರದ ಮೇಲೆ 3 ಮಂದಿಗೆ ನೌಕರಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ನೇಮಕಾತಿಯ ಆದೇಶ ಪತ್ರ ಹಾಗೂ ಸಹಾಯಕಿ‌ ಹುದ್ದೆಯಿಂದ ಕಾರ್ಯಕರ್ತೆ ಹುದ್ದೆಗೆ ಪದೋನ್ನತಿ ಹೊಂದಿದ ಹಾಗೂ ಅನುಕಂಪ ಆಧಾರದ ಮೇಲೆ ಆಯ್ಕೆಗೊಂಡವರಿಗೂ ಆದೇಶ ಪತ್ರವಿತರಿಸಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮಾಂಟೆಸ್ಸರಿ ಶೀಘ್ರವೇ ರಾಜ್ಯಾದ್ಯಂತ ವಿಸ್ತರಗೊಳ್ಳಲಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳು ಅನುದಾನ ನೀಡಲಿದ್ದು, ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ ಕೂಡ ಸಿಗಲಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲೆಯ ಉಪ ನಿರ್ದೇಶಕ ನಾಗರಾಜ್, ಸಿಡಿಪಿಒ ಸುಮಿತ್ರಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.