ಸಾರಾಂಶ
ಹೆದ್ದಾರಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಬೇಜಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಇಂತಹ ಅವಘಡಗಳು ಸಂಭವಿಸುತ್ತಿದೆ.
ತಿಪಟೂರು: ಬೈಕಿಗೆ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಿಬ್ಬನಹಳ್ಳಿ ಹೋಬಳಿ ಕರಡಿಕೋಡಿ ಸಮೀಪ ಶುಕ್ರವಾರ ನಡೆದಿದೆ.
ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ವಾಸಿ ಅವಿನಾಶ್ (30) ಮೃತಪಟ್ಟ ದುರ್ದೈವಿ. ಕರಡಿ ಕೋಡಿ ಬಳಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇಲ್ಲಿ ಯಾವುದೇ ರಸ್ತೆ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡುತ್ತಿಲ್ಲವಾದ್ದರಿಂದ ಇಂತಹ ಹಲವು ಪ್ರಕರಣಗಳು ನಡೆದಿವೆ. ಹೆದ್ದಾರಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಬೇಜಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಇಂತಹ ಅವಘಡಗಳು ಸಂಭವಿಸುತ್ತಿದ್ದು ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಮುಂಜಾಗ್ರತ ಕ್ರಮಕೈಗೊಳ್ಳಬೇಕೆಂದು ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ಮಾಡಿದರು. ಸ್ಥಳಕ್ಕೆ ಕೆ.ಬಿ. ಕ್ರಾಸ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡರು.ಫೋಟೋ 14-ಟಿಪಿಟಿ2ರಲ್ಲಿ ಕಳುಹಿಸಲಾಗಿದೆ. ಶೀರ್ಷಿಕೆ : ಅಪಘಾತ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಬೇಜವಾಬ್ದಾರಿ ಖಂಡಿಸಿ ಪ್ರತಿಭಟನೆ ಮಾಡಿದ ಗ್ರಾಮಸ್ಥರು.;Resize=(128,128))
;Resize=(128,128))
;Resize=(128,128))