ಸಾರಾಂಶ
ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹರಿಹರದಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಸಾರಿಗೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ್ದಾರೆ.
- ವಿದ್ಯಾರ್ಥಿಗಳೊಂದಿಗೆ ಬಸ್‌ನಲ್ಲಿ ಸಂಚರಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್
- - -ಹರಿಹರ: ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹರಿಹರದಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಸಾರಿಗೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ್ದಾರೆ.
ಹರಿಹರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ಸಂಚಾರ ವ್ಯವಸ್ಥೆಗೆ ಚಾಲನೆ ನೀಡಿದ ಸಂಸದರು, ವಿದ್ಯಾರ್ಥಿಗಳೊಂದಿಗೆ ಸಂಚಾರ ಮಾಡಿದರು. ಹರಿಹರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ತೆರಳುವ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿ, ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಸಂಸದರೊಂದಿಗೆ ಹಂಚಿಕೊಂಡರು. ಸಂಸದರ ಸ್ಪಂದನೆಗೆ ಧನ್ಯವಾದ ಸಹ ಅರ್ಪಿಸಿದರು.ಹರಿಹರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಪ್ರತಿನಿತ್ಯ ಬೆಳಗ್ಗೆ 8-30, 8-45, 9-00, 9-15 ಸಮಯದಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಬಸ್ ತೆರಳಲಿದೆ. ಅಂತೆಯೇ, ಪ್ರತಿನಿತ್ಯ ಸಂಜೆ 5-00, 5-15, 5-30 ಹಾಗೂ 5-45 ಗಂಟೆಗೆ ದಾವಣಗೆರೆ ವಿ.ವಿ.ಯಿಂದ ಹರಿಹರಕ್ಕೆ ಬಸ್ ಆಗಮಿಸಲಿದೆ ಎಂದು ಸಾರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಕೃಷ್ಣಾಸಾ ಭೂತೆ, ಸಿ.ಎನ್.ಹುಲುಗೇಶ್, ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.- - -
(** ಈ ಪೋಟೋ ಕ್ಯಾಪ್ಷನ್ ಪ್ಯಾನೆಲ್‌ಗೆ ಬಳಸಬಹುದು)-22ಎಚ್‍ಆರ್‍ಆರ್01:
ಹರಿಹರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಸಾರಿಗೆ ವ್ಯವಸ್ಥೆಗೆ ಚಾಲನೆ ನೀಡಿದ ಬಳಿಕ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ವಿದ್ಯಾರ್ಥಿಗಳೊಂದಿಗೆ ಬಸ್‌ನಲ್ಲಿ ಸಂಚರಿಸಿದರು.