ಹೃದಯಾಘಾತಕ್ಕೆ ಸಾರಿಗೆ ಸಂಸ್ಥೆಯ ಚಾಲಕ ಬಲಿ

| Published : Jul 10 2025, 12:46 AM IST

ಸಾರಾಂಶ

ಲಕ್ಷ್ಮೇಶ್ವರ ಪಟ್ಟಣದ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಪಿ.ಲಕ್ಷ್ಮಣ ಅವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.

ಲಕ್ಷ್ಮೇಶ್ವರ: ಪಟ್ಟಣದ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಪಿ.ಲಕ್ಷ್ಮಣ ಅವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಲಕ್ಷ್ಮಣ ಅವರಿಗೆ ಮಂಗಳವಾರ ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಕೊಂಡು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತೀವ್ರ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರು ಪಟ್ಟಣದ ಸಾರಿಗೆ ಸಂಸ್ಥೆಯಲ್ಲಿ ಕಳೆದ 27 ವರ್ಷಗಳಿಂದ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯ ಸರ್ಕಾರ ಕೊಡಮಾಡುವ ಉತ್ತಮ ಚಾಲಕ ಪುರಸ್ಕಾರಕ್ಕೆ ಭಾಜನರಾಗಿದ್ದರು. ರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಬಸ್ ಅಲಂಕಾರ ಮಾಡಿ ಜನರಿಂದ ಶಹಭಾಷ್ ಎಂದು ಕರೆಯಿಸಿಕೊಂಡಿದ್ದರು. ಅವರ ಅಕಾಲಿಕ ಮರಣವು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ ಎಂದು ಡಿಪೋ ಮ್ಯಾನೇಜರ್ ಸವಿತಾ ಆದಿ ಹೇಳಿದರು.