ಶಕ್ತಿ ಯೋಜನೆಯ ಯಶಸ್ಸಿನ ಪರಿಣಾಮವಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಸಾರ್ವಜನಿಕರ ಹಾಗೂ ಗ್ರಾಮೀಣ ಭಾಗದ ಜನರ ಬೇಡಿಕೆಗೆ ತಕ್ಕಂತೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಸುಸಜ್ಜಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಯಾಸೀರ್‌ಅಹ್ಮದಖಾನ್ ಪಠಾಣ್ ತಿಳಿಸಿದರು.
ಶಿಗ್ಗಾಂವಿ: ಶಕ್ತಿ ಯೋಜನೆಯ ಯಶಸ್ಸಿನ ಪರಿಣಾಮವಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಸಾರ್ವಜನಿಕರ ಹಾಗೂ ಗ್ರಾಮೀಣ ಭಾಗದ ಜನರ ಬೇಡಿಕೆಗೆ ತಕ್ಕಂತೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಸುಸಜ್ಜಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಯಾಸೀರ್‌ಅಹ್ಮದಖಾನ್ ಪಠಾಣ್ ತಿಳಿಸಿದರು.ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ೮ ಹೊಸ ಬಸ್‌ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಸದ್ಯ ಪ್ರಾಯೋಗಿಕವಾಗಿ ೮ ನೂತನ ಬಸ್‌ಗಳನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗಿದೆ. ಮುಂಬರುವ ೧೫ ದಿನಗಳಲ್ಲಿ ಕ್ಷೇತ್ರಕ್ಕೆ ಇನ್ನೂ ೧೫ ಹೊಸ ಬಸ್‌ಗಳನ್ನು ಬಿಡಲಾಗುವುದು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ಭರಮಗೌಡ (ರಾಜು) ಕಾಗೆ ಹಾಗೂ ಉಪಾಧ್ಯಕ್ಷರಾದ ಸುನೀಲ ಹನಮ್ಮಣ್ಣವರ ಅವರ ವಿಶೇಷ ಕಾಳಜಿಯಿಂದಾಗಿ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಬಸ್‌ಗಳ ವ್ಯವಸ್ಥೆ ದೊರೆತಿದೆ ಎಂದು ಶಾಸಕರು ಕೃತಜ್ಞತೆ ಸಲ್ಲಿಸಿದರು.ಬಸ್‌ಗಳಲ್ಲಿ ಜಾಗವಿಲ್ಲದೇ ವಿದ್ಯಾರ್ಥಿಗಳು ಬಾಗಿಲ ಬಳಿ ನಿಂತು, ಜೋತಾಡಿಕೊಂಡು ಅಪಾಯಕಾರಿಯಾಗಿ ಪ್ರಯಾಣಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು. ಮಕ್ಕಳ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ, ಶಾಲಾ-ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್‌ಗಳುಸಂಚರಿಸುವಂತೆ ಮುಂಜಾಗ್ರತೆ ವಹಿಸಬೇಕು. ಈಗಾಗಲೇ ಹೆಚ್ಚು ಪ್ರಯಾಣಿಕರು ಇರುವ ಮಾರ್ಗಗಳನ್ನು ಗುರುತಿಸಲಾಗಿದ್ದು, ಅಲ್ಲಿ ಹೆಚ್ಚಿನ ಬಸ್ ಗಳನ್ನು ನಿಯೋಜಿಸಲಾಗುವುದು ಎಂದರು.
ಗುಡ್ಡಪ್ಪ ಜಲದಿ, ಸುರೇಶ ಹರಿಜನ, ಎಸ್.ಎಫ್, ಮಣಕಟ್ಟಿ ಸುಭಾಸ್ ಮಜ್ಜಗಿ, ಗೌಸಖಾನ್ ಮುನಶಿ, ಮಂಜುನಾಥ ತಿಮ್ಮಾಪುರ, ಭಾಬರ್ ಭೋವಾಜಿ, ಮುನ್ನಾ ಲಕ್ಷ್ಮೀಶ್ವರ, ಚಂದ್ರು ಕೊಡ್ಲಿವಾಡ, ಶಂಭುಲಿಂಗಪ್ಪ ಆಜೂರ, ವಸಂತಾ ಬಾಗೂರ, ಮಲ್ಲಮ್ಮ ಸೋಮನಕಟ್ಟಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು, ಸಾರಿಗೆ ಸಂಸ್ಥೆಯ ಉನ್ನತ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳ ಬಳಿ ತೆರಳಿ ಸಂವಾದನೂತನ ಬಸ್‌ಗಳಿಗೆ ಚಾಲನೆ ನೀಡಿದ ಬಳಿಕ ಶಾಸಕ ಯಾಸೀರ್‌ಅಹ್ಮದಖಾನ್ ಪಠಾಣ್ ಅವರು ಬಸ್ ನಿಲ್ದಾಣದಲ್ಲಿದ್ದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಬಳಿಗೆ ತೆರಳಿ ಸಂವಾದ ನಡೆಸಿದರು. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಎದುರಾಗುತ್ತಿರುವ ಬಸ್ ಸಮಸ್ಯೆಗಳು ಮತ್ತು ಮಾರ್ಗಗಳ ಕುರಿತು ಮಾಹಿತಿ ಪಡೆದರು. ವಿದ್ಯಾರ್ಥಿಗಳ ಸಮಸ್ಯೆಗೆ ತಕ್ಷಣ ಸ್ಪಂದಿಸುವುದಾಗಿ ಭರವಸೆ ನೀಡಿದ ಶಾಸಕರು, ನಂತರ ಬಸ್ ನಿಲ್ದಾಣದ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿ ಆಹಾರದ ಗುಣಮಟ್ಟ ಹಾಗೂ ವ್ಯವಸ್ಥೆ ಪರಿಶೀಲಿಸಿದರು.