ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಘಟನೆ ಇಲ್ಲಿಗೆ ಸಮೀಪದ ಕಕ್ಕಬೆ -ನೆಲಜಿ ರಸ್ತೆಯಲ್ಲಿ ಗುರುವಾರ ರಾತ್ರಿ ಜರುಗಿದೆ.
ನಾಪೋಕ್ಲು: ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಘಟನೆ ಇಲ್ಲಿಗೆ ಸಮೀಪದ ಕಕ್ಕಬೆ -ನೆಲಜಿ ರಸ್ತೆಯಲ್ಲಿ ಗುರುವಾರ ರಾತ್ರಿ ಜರುಗಿದೆ.
ಕುಂಜಿಲ ಗ್ರಾಮದ ನಿವಾಸಿ ಆಟೋ ಚಾಲಕ ಪಿ.ಎ ಮೊಹಮ್ಮದ್ ಎಂಬವರು ಗುರುವಾರ ರಾತ್ರಿ ತಮ್ಮ ಆಟೋದಲ್ಲಿ ಕಕ್ಕಬೆಯಿಂದ ನೆಲಜಿಯತ್ತ ಬಾಡಿಗೆ ತೆರಳಿ ಹಿಂತಿರುಗಿ ಬರುವ ಸಂದರ್ಭ ರಸ್ತೆ ಬದಿಯ ತೋಟದ ಮರವೊಂದು ಆಟೋರಿಕ್ಷಾದ ಮೇಲೆ ಉರುಳಿ ಬಿದ್ದಿದೆ. ಇದರಿಂದ ಚಾಲಕ ಮಹಮ್ಮದ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮರ ಬಿದ್ದ ಪರಿಣಾಮ ಆಟೋರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.