ಕೇವಲ ₹2.50 ಕೋಟಿ ವೆಚ್ಚದಲ್ಲಿ ಇಷ್ಟೊಂದು ಅದ್ಭುತವಾಗಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇಂಡಿ ನಗರದಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತದೆ. ಇಂಡಿ ವಿಧಾನಸಭಾ ಮತಕ್ಷೇತ್ರದಲ್ಲಿ ಕೃಷ್ಣಮ್ಮಗ ಸಮುದಾಯ ಮೀಸಲು ಪ್ರದೇಶವನ್ನಾಗಿ ಘೋಷಣೆ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಇಂಡಿ

ಕೇವಲ ₹2.50 ಕೋಟಿ ವೆಚ್ಚದಲ್ಲಿ ಇಷ್ಟೊಂದು ಅದ್ಭುತವಾಗಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇಂಡಿ ನಗರದಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತದೆ. ಇಂಡಿ ವಿಧಾನಸಭಾ ಮತಕ್ಷೇತ್ರದಲ್ಲಿ ಕೃಷ್ಣಮ್ಮಗ ಸಮುದಾಯ ಮೀಸಲು ಪ್ರದೇಶವನ್ನಾಗಿ ಘೋಷಣೆ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ವಿಜಯಪುರದ ಸಾಮಾಜಿಕ ಅರಣ್ಯ ವಿಭಾಗ ಹಾಗೂ ಇಂಡಿ ಸಾಮಾಜಿಕ ಅರಣ್ಯ ವಲಯದ ಜಂಟಿ ಸಹಯೋಗದಲ್ಲಿ ಇಂಡಿ ತಾಲೂಕಿನ ಸಾವಳಸಂಗದಲ್ಲಿ ನಿರ್ಮಿಸಲಾಗಿರುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನವನ್ನು ಭಾನುವಾರ ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಹಸಿರೀಕರಣ ಹೆಚ್ಚಿಸಲು ಕೈಗೊಂಡಿರುವ ಈ ಕಾರ್ಯವನ್ನು ಪ್ರಶಂಸಿಸಿದ ಸಚಿವರು, ಈ ಜಗತ್ತು ನಿಂತಿದ್ದೇ ಪ್ರಕೃತಿಯಿಂದ, ಹಾಗಾಗಿ ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದರು.ಈ ವೃಕ್ಷೋದ್ಯಾನಕ್ಕೆ ನಡೆದಾಡುವ ದೇವರು ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನಿರಿಸಿರುವುದು ಶ್ರೇಷ್ಠ ಎಂದ ಅವರು, ಪ್ರತಿಯೊಬ್ಬರ ಹೃದಯದಲ್ಲೂ ಸರಳತೆ, ಜ್ಞಾನ ಹಾಗೂ ಪರಿಸರ ಪ್ರೀತಿ ಮೂಡಿಸುವಂತಿದೆ. ಅವರ ಸಾನ್ನಿಧ್ಯ ಮತ್ತು ಪ್ರೇರಣೆಯಿಂದ ನಿರ್ಮಾಣಗೊಂಡಿರುವ ಈ ಆಕರ್ಷಕ ತಾಣ ಜನರಲ್ಲಿ ಪ್ರಕೃತಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಮಾಡುತ್ತದೆ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ನಾಗರಿಕರು ಸಸಿ ನೆಡುವ ಮೂಲಕ ಇದನ್ನು ತಮ್ಮ ಸ್ವಂತ ಆಸ್ತಿಯಂತೆ ಸಂರಕ್ಷಿಸಬೇಕು ಎಂದು ಸಚಿವರು ಕರೆ ನೀಡಿದರು.

ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ಕೈಗೊಂಡಿರುವ ಶಾಸಕರ ಶ್ರಮವನ್ನು ಕೊಂಡಾಡಿದ ಸಚಿವರು, ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಯಿಂದ ಈ ಭಾಗದ ಜನರಿಗೆ ಮತ್ತು ಕೃಷಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಅರಣ್ಯ ಇಲಾಖೆಯ ಸತತ ಪರಿಶ್ರಮ ಹಾಗೂ ತಾವು ನೀಡಿದ ₹90 ಲಕ್ಷ ಅನುದಾನ ಸೇರಿದಂತೆ ಅನೇಕರ ಸಹಕಾರದಿಂದ ಈ ವೃಕ್ಷೋದ್ಯಾನ ರೂಪುಗೊಂಡಿದೆ. ಸಿದ್ದೇಶ್ವರ ಸ್ವಾಮೀಜಿ ಅವರ ಆಶಯದಂತೆ ಈ ವೃಕ್ಷೋದ್ಯಾನ ನಿರ್ಮಾಣವಾಗಿದೆ. ಸರ್ಕಾರದ ಜತೆ ನಾಗರಿಕರ ಸಹಭಾಗಿತ್ವ ಬಹಳ ಮುಖ್ಯವಾಗಿದೆ. ಇಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನಿಸರ್ಗವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ . ನಮ್ಮ ಜಿಲ್ಲೆಯ ಅರಣ್ಯ ಪ್ರದೇಶ ಹೆಚ್ಚಾಗುವಲ್ಲಿ ಸಸಿ ‌ನೆಡಿ, ಅರಣ್ಯೀಕರಣ ಬೆಳೆಸುವ ಪ್ರಯತ್ನ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಹಸರೀಕರಣವಾಗುವ ನಿಟ್ಟಿನಲ್ಲಿ ಪ್ರಯತ್ನ ಮಾಡೋಣ ಎಂದರು.ಆಲಮಟ್ಟಿ ಜಲಾಶಯಕ್ಕಾಗಿ ಭೂಮಿ ತ್ಯಾಗ ಮಾಡಿದ ಪುಣ್ಯಾತ್ಮರ ಬಲದಿಂದಲೇ ಇಂದು ಈ ಭಾಗ ಉಸಿರಾಡುತ್ತಿದೆ ಎಂದು ಸ್ಮರಿಸಿದ ಶಾಸಕರು, ಬರದಿಂದ ತತ್ತರಿಸಿದ್ದ ಈ ಕ್ಷೇತ್ರದಲ್ಲಿ ನೀರಿನ ಅಭಾವ ನೀಗಿಸಲು ರೂಪಿಸಲಾದ ನೀರಾವರಿ ಯೋಜನೆಗಳು ಸ್ವಲ್ಪಮಟ್ಟಿಗೆ ಅನುಕೂಲವಾಗಿವೆ. ಕ್ಷೇತ್ರದಲ್ಲಿ ಈಗಾಗಲೇ 19 ಕೆರೆಗಳನ್ನು ತುಂಬಿಸಿದ್ದರಿಂದ ಅಂತರ್ಜಲ ಮಟ್ಟ ಹೆಚ್ಚಳಗೊಂಡಿದೆ. ಆ ಮೂಲಕ ಈ ಭಾಗದ ರೈತರಿಗೆ ಅನುಕೂಲವಾಗಿದೆ. ಇಂಡಿ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಈಗಾಗಲೇ ಶಾಶ್ವತ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ತಿಳಿಸಿದರು.ಬೆಳೆ ಹಾನಿಗೆ ಶೀಘ್ರ ಪರಿಹಾರ:

ಮಳೆಯಾಗದೆ ಬೆಳೆ ಕಳೆದುಕೊಂಡಿರುವ ರೈತರ ಹಿತ ಕಾಯಲು ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತರಿಗೆ ಶೀಘ್ರವೇ ಪರಿಹಾರ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನೀಡಿದ ಅವರು, ಕ್ಷೇತ್ರ ಅಭಿವೃದ್ಧಿಪಡಿಸಲು ಹಾಗೂ ಈ ಭಾಗದ ರೈತರ ಸಂಕಟಗಳಿಗೆ ಸ್ಪಂದಿಸಲು ತಾವು ಬದ್ಧವಾಗಿದ್ದು, ಮುಖ್ಯಮಂತ್ರಿಗಳು ಕೂಡ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದರು.ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಹಾಗೂ ಅಮೃತನಾಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

ಅಮೋಘ ಸಿದ್ದೇಶ್ವರ ಸ್ವಾಮೀಜಿ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಿ.ಎಸ್‌. ಕವಲಗಿ, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಪ್ರಶಾಂತ ಕಾಳೆ, ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಬೆಳಗಾವಿ ಮುಖ್ಯ ಅರಣ್ಯ ಸಂಸರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ, ವಿಜಯಪುರ ಉಪ ಅರಣ್ಯ ಸಂರಕ್ಷಾಧಿಕಾರಿ ಮಲ್ಲಿನಾಥ ಕುಸನಾಳ, ಡಿಸಿಎಫ್ ಬಾಗಲಕೋಟೆ ವಲಯ ಅರಣ್ಯಾಧಿಕಾರಿ ಸ್ವಪ್ನಿಲ್, ಡಿವೈಎಸ್ಪಿ ಸದಾಶಿವ ಕಟ್ಟಿಮನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರುದ್ರಪ್ಪ ಕಬಾಡಿಗ, ವಲಯ ಅರಣ್ಯಾಧಿಕಾರಿ ಮಂಜುನಾಥ ಧೂಳೆ, ಎಸ್.ಜಿ.ಸಂಗಾಲಕ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್.ಪಾಕಿ, ತಾಪಂ ಇಒ ಮಹಾದೇವಪ್ಪ ಏವೂರ, ತಹಸೀಲ್ದಾರ ನಾಗೇಂದ್ರ ಕೊಳಶೆಟ್ಟಿ, ಎಂ.ಆರ್.ಪಾಟೀಲ ಮತ್ತು ವಿವಿಧ ಮಠಾಧೀಶರು, ಪರಿಸರ ಪ್ರೇಮಿಗಳು, ಶಾಲಾ-ಕಾಲೇಜ್‌ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಫೌಂಡೇಷನ್ ದಿಂದ ಹಲವು ಸಮಾಜಮುಖಿ ಕಾರ್ಯಗಳು ಮಾಡಲಾಗುತ್ತಿದೆ.ಬಾಲ್ಯದ ಶಾಲಾ ದಿನಗಳಲ್ಲಿಯೂ ಶಾಲೆಯ ಆವರಣದಲ್ಲಿ ಸಸಿ ನೆಟ್ಟು ಪೋಷಿಸಿದ ಪರಿಸರ ಕಾಳಜಿಯನ್ನು ನೆನಪಿಸಿಕೊಂಡರು.ಪ್ರತಿಯೊಬ್ಬರು ಪರಿಸರವನ್ನು ಸಂರಕ್ಷಿಸಬೇಕು.ಉತ್ತಮ ಪರಿಸರ,ಗಾಳಿಗಾಗಿ ಸಸಿಗಳನ್ನು ನೆಡುವುದು ಅಗತ್ಯವಾಗಿದೆ. ಪ್ರಾಣಿ,ಪಕ್ಷಿಗಳ ಮೇಲೆ ಕರುಣಿಸಿ,ಪ್ರೀತಿಸಬೇಕು. ಅಂತೆಯೇ ಬೇಸಿಗೆಯಲ್ಲಿ ಫೌಂಡೇಷನ್ ವತಿಯಿಂದ ಪಕ್ಷಿಗಳಿಗೆ ಹನಿ ನೀರು ಎಂಬ ಅಭಿಯಾನದಲ್ಲಿ ಮರಗಳಿಗೆ ನೀರಿನ ತೊಟ್ಟಿಗಳನ್ನು ಕಟ್ಟಿ ನೀರುಣಿಸಲಾಗಿದೆ.

-ಶಿವಲೀಲಾ ಪಾಟೀಲ,

ಗೌರವಾಧ್ಯಕ್ಷೆ ಶ್ರೀ ಯಶವಂತರಾಯಗೌಡ ವಿ. ಪಾಟೀಲ ಫೌಂಡೇಷನ್