ಮರಗಳು ಪರಿಸರ ಸಮತೋಲನಕ್ಕೆ ಸಹಕಾರಿ

| Published : Jun 09 2024, 01:36 AM IST

ಸಾರಾಂಶ

ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರದಲ್ಲಿ ಉನ್ನತಿ ಟ್ರಸ್ಟ್ ಮತ್ತು ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ (ಟಿವಿಎಸ್) ಕರ್ನಾಟಕ ಕ್ಲಸ್ಟರ್ ಚಾಮರಾಜನಗರ ವತಿಯಿಂದ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಾಲೂಕಿನ ಸಿದ್ದಯ್ಯನಪುರದಲ್ಲಿ ಉನ್ನತಿ ಟ್ರಸ್ಟ್ ಮತ್ತು ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ (ಟಿವಿಎಸ್) ಕರ್ನಾಟಕ ಕ್ಲಸ್ಟರ್ ಚಾ.ನಗರ ವತಿಯಿಂದ ಗಿಡ ನೆಡುವುದರ ಮುಖಾಂತರ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉನ್ನತಿ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಮಾತನಾಡಿ, ಗಿಡ, ಮರಗಳು ಇಂಗಾಲದ ಡೈ ಆಕ್ಸೈಡ್ ಹೀರಿಕೊಂಡು ನಮಗೆ ಆಮ್ಲಜನಕ ನೀಡುತ್ತವೆ. ಮರಗಳಲ್ಲಿ ಪರಿಸರ ಸಮತೋಲನಕ್ಕೆ ಸಹಕಾರಿಯಾಗುವ ಸೂಕ್ಷಾಣು ಜೀವಿಗಳು ಇರುತ್ತವೆ. ಕಾಲಕಾಲಕ್ಕೆ ಮಳೆಯಾಗಿ ಬೆಳೆ ಬೆಳೆಯಲು ಮರಗಳು ಅವಶ್ಯ. ಆದ್ದರಿಂದ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕಿದೆ ಎಂದರು‌.ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನಿ, ಒಂದು ಗಿಡ ನೀಡುವ ಮೂಲಕ ಪರಿಸರ ಪ್ರೇಮ ಮೆರೆದರು.

ಕಾರ್ಯಕ್ರಮದಲ್ಲಿ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ ಚಾಮರಾಜನಗರ ಕೆ.ಗುಡಿ ವನ್ಯಜೀವಿ ವಲಯ, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು. ಎಸ್.ವಿನೋದ್ ಗೌಡ, ನಲ್ಲೂರು ವಲಯ ಅರಣ್ಯಾಧಿಕಾರಿ ಕೆ.ಗುಡಿ ವನ್ಯ ಜೀವಿ ವಲಯ ಮಹದೇವಸ್ವಾಮಿ, ಸಮುದಾಯ ಅಭಿವೃದ್ಧಿ ಅಧಿಕಾರಿ ಟಿವಿಎಸ್‌ ಕರ್ನಾಟಕ ಕ್ಲಸ್ಟರ್ ಹಾಗೂ ಉನ್ನತಿ ಟ್ರಸ್ಟ್ ನ ಅಧ್ಯಕ್ಷ ಎಂ.ರಮೇಶ್, ಗ್ರಾಮದ ಯಜಮಾನರು, ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ಶಾಲಾಭಿವೃದ್ದಿ ಅದ್ಯಕ್ಷರು, ಶಿಕ್ಷಕರ ವೃಂದ, ವಿದ್ಯಾರ್ಥಿಗಳು, ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು, ರೈತರು ಭಾಗವಹಿಸಿದ್ದರು.