ಡಾ. ಅಂಬೇಡ್ಕರ್ ಅವರ ಆದರ್ಶಗಳು, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವಲ್ಲಿ ಇಂತಹ ಭೇಟಿಗಳು ಪ್ರೇರಣೆಯಾಗಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟರು. ಚಿಕ್ಕಮಗಳೂರಿನಿಂದ ಬೇಲೂರು ಮೂಲಕ ತಾಲೂಕಿನ ಮದಘಟ್ಟದಲ್ಲಿರುವ ಗಾಂಧಾರ ಬುದ್ಧ ವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ, ಪಟ್ಟಣದ ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ಅಂಬೇಡ್ಕರ್‌ ಅಭಿಮಾನಿಗಳು ಭೀಮರಾವ್ ಯಶ್ವಂತ್ ಅಂಬೇಡ್ಕರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಅವರು ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ಸ್ಥಾಪಿತವಾಗಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾಹಾರ ಅರ್ಪಿಸಿ ಗೌರವ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರುಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಮೊಮ್ಮಗರಾದ ಭೀಮರಾವ್ ಯಶ್ವಂತ್ ಅಂಬೇಡ್ಕರ್ ಅವರು ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ, ಬೇಲೂರಿನ ಅಂಬೇಡ್ಕರ್ ಅಭಿಮಾನಿಗಳು ಹಾಗೂ ಸಮುದಾಯದ ಮುಖಂಡರು ಸ್ವಾಗತಿಸಿ ಗೌರವ ಸಲ್ಲಿಸಿದರು.ಡಾ. ಅಂಬೇಡ್ಕರ್ ಅವರ ಆದರ್ಶಗಳು, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವಲ್ಲಿ ಇಂತಹ ಭೇಟಿಗಳು ಪ್ರೇರಣೆಯಾಗಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟರು. ಚಿಕ್ಕಮಗಳೂರಿನಿಂದ ಬೇಲೂರು ಮೂಲಕ ತಾಲೂಕಿನ ಮದಘಟ್ಟದಲ್ಲಿರುವ ಗಾಂಧಾರ ಬುದ್ಧ ವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ, ಪಟ್ಟಣದ ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ಅಂಬೇಡ್ಕರ್‌ ಅಭಿಮಾನಿಗಳು ಭೀಮರಾವ್ ಯಶ್ವಂತ್ ಅಂಬೇಡ್ಕರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಅವರು ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ಸ್ಥಾಪಿತವಾಗಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾಹಾರ ಅರ್ಪಿಸಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ನೆರೆದಿದ್ದ ಅಭಿಮಾನಿಗಳು ಮತ್ತು ಅನುಯಾಯಿಗಳು “ಭೀಮ್‌, ಭೀಮ್‌” ಎಂಬ ಘೋಷಣೆಗಳನ್ನು ಕೂಗಿ ಸಂವಿಧಾನ ಶಿಲ್ಪಿಯ ಪರಂಪರೆಯನ್ನು ಸ್ಮರಿಸಿದರು. ಬಳಿಕ ಭೀಮರಾವ್ ಯಶ್ವಂತ್ ಅಂಬೇಡ್ಕರ್ ಅವರು ನೇರವಾಗಿ ತಾಲೂಕಿನ ಮದಘಟ್ಟದಲ್ಲಿರುವ ಗಾಂಧಾರ ಬುದ್ಧ ವಿಹಾರಕ್ಕೆ ತೆರಳಿದರು.ಈ ಕಾರ್ಯಕ್ರಮದಲ್ಲಿ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಡಿಸಿಪಿ ಸಿದ್ಧರಾಜು, ತಾಪಂ ಮಾಜಿ ಅಧ್ಯಕ್ಷ ಪರ್ವತಯ್ಯ, ಮಾಜಿ ಸದಸ್ಯ ಮಂಜುನಾಥ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ವೆಂಕಟೇಶ್, ಪುರಸಭೆ ಸದಸ್ಯ ಚಾ.ನಾ. ದಾನಿ, ದಲಿತ ಮುಖಂಡರಾದ ಬಿ. ಎಲ್. ಲಕ್ಷ್ಮಣ್, ವೆಂಕಟೇಶ್, ರಘು, ರವಿ, ವಕೀಲ ರಾಜು, ನಿಂಗರಾಜು, ಸತೀಶ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.