ಕುಂದಾಪುರ: ಪತ್ರಕರ್ತ ಜಯಕರ ಸುವರ್ಣಗೆ ಶ್ರದ್ಧಾಂಜಲಿ

| Published : Aug 09 2024, 12:46 AM IST / Updated: Aug 09 2024, 12:47 AM IST

ಸಾರಾಂಶ

ನಗರದ ಪ್ರೆಸ್‌ಕ್ಲಬ್‌ನಲ್ಲಿ ಅಗಲಿದ ಪತ್ರಕರ್ತ ಜಯಕರ ಸುವರ್ಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಜಯಕರ ಸುವರ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಹಿರಿಯ ಪತ್ರಕರ್ತರಾಗಿ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಾ ಬಂದಿದ್ದ ಜಯಕರ ಸುವರ್ಣ ಅವರು ಸರಳ ವ್ಯಕ್ತಿತ್ವದ ಸಜ್ಜನ ವರದಿಗಾರ ಎಂದು ಹೆಸರಾದವರು. ಅವರ ಜೀವನದಲ್ಲಿ ಹಮ್ಮುಬಿಮ್ಮಿಲ್ಲದೆ ಎಲ್ಲರೊಂದಿಗೆ ಬೆರೆತು ಸಾಮಾಜಿಕ ಬದ್ಧತೆಯನ್ನು ಮೆರೆದವರು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಆಯೋಜಿಸಿದ ಅಗಲಿದ ಪತ್ರಕರ್ತ ಜಯಕರ ಸುವರ್ಣ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಜಯಕರ ಸುವರ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಛಾಯಾ ಪತ್ರಕರ್ತ ಸಂತೋಷ್ ಕುಂದೇಶ್ವರ, ಪತ್ರಕರ್ತ ಪ್ರಶಾಂತ ಪಾದೆ ನುಡಿನಮನ ಸಲ್ಲಿಸಿದರು.

ಈ ಸಂದರ್ಭ ದಿವಂಗತ ಜಯಕರ ಸುವರ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಬಳಿಕ ಒಂದು ನಿಮಿಷ ಮೌನಾಚರಣೆ ಮಾಡಿ ಸದ್ಗತಿ ಕೋರಲಾಯಿತು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ, ಕೋಶಾಧಿಕಾರಿ ಟಿ. ಲೋಕೇಶ ಆಚಾರ್ಯ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.