ಸಾರಾಂಶ
ಕನ್ನಡಪ್ರಭ ವಾರ್ತೆ ಭಾರತೀನಗರ
ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ದಲಿತ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ ದಲಿತ ಮುಖಂಡ ಕಬ್ಬಾಳಯ್ಯ ಮಾತನಾಡಿ, ಸರಳ, ಸಜ್ಜನಿಕೆಗೆ ಹೆಸರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಕಳೆದುಕೊಂಡಿರುವುದು ನಮ್ಮ ಸಮುದಾಯಕ್ಕೆ ಅಪಾರ ನಷ್ಟ ಉಂಟಾಗಿದೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿ ನಮ್ಮೊಟ್ಟಿಗೆ ಕೈಜೋಡಿಸುತ್ತಿದ್ದರು. ಇವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದರು.
ಸಮತ ಸೈನಿಕ ದಳದ ಜಿಲ್ಲಾಧ್ಯಕ್ಷ ಕರಡಕೆರೆ ಯೋಗೇಶ್ ಮಾತನಾಡಿ, ವಿ.ಶ್ರೀನಿವಾಸ್ ಪ್ರಸಾದ್ ಅವರು ದೈಹಿಕವಾಗಿ ನಮ್ಮೊಟ್ಟಿಗೆ ಇಲ್ಲದಿದ್ದರೂ ಸಹ ಅವರು ಮಾಡಿರುವ ಕೆಲಸಗಳು ನಮ್ಮೊಡನೆ ಅಚ್ಚಳಿಯದೆ ಉಳಿದುಕೊಂಡಿವೆ. ಸಚಿ ವಸ್ಥಾನದಲ್ಲಿ ಇದ್ದರೂ ಸಹ ಸಾಮಾನ್ಯರಲ್ಲಿ ಸಾಮಾನ್ಯರಂತೆ ಇದ್ದರು. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.ಈ ವೇಳೆ ತಾಪಂ ಮಾಜಿ ಸದಸ್ಯ ಭರತೇಶ್, ಗುಡಿಗೆರೆ ಬಸವರಾಜು, ಮುಡೀನಹಳ್ಳಿ ತಿಮ್ಮಯ್ಯ, ಅಮೀನ್ ಶಿವಲಿಂಗಯ್ಯ, ರಾಮಣ್ಣ, ಕಾಡುಕೊತ್ತನಹಳ್ಳಿ ಮರಿಸ್ವಾಮಿ, ರುದ್ರಯ್ಯ, ಪುಟ್ಟಸ್ವಾಮಿ, ಪ್ರಸಾದ್, ಬಸವರಾಜು, ಅಣ್ಣೂರು ನಿರಂಜನ್, ಯಲಾದಹಳ್ಳಿ ರುದ್ರೇಶ್, ಪುಟ್ಟಯ್ಯ, ಹೊನ್ನಲಗೆರೆ ಶಿವಣ್ಣ, ಕೆ.ಕೆ.ಹಳ್ಳಿ ರುದ್ರಯ್ಯ ಸೇರಿದಂತೆ ಹಲವರಿದ್ದರು.ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ
ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲಾ ವ್ಯಾಪ್ತಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ -2 ಏ.29ರಿಂದ ಮೇ 16 ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ - 2 ಅನ್ನು ಸುಗಮವಾಗಿ ನಡೆಯಲು ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ದಿನಗಳಂದು 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ ಇತರರು ಯಾರೂ ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.ಪರೀಕ್ಷಾ ಕೇಂದ್ರಗಳು:
ಮಾಂಡವ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಂಡ್ಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ), ಮದ್ದೂರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಳವಳ್ಳಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಆರ್.ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀರಂಗಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಾಂಡವಪುರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.