ಸಾರಾಂಶ
ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಜನಪರವಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಶಿಗ್ಗಾಂವಿ: ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಜನಪರವಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಶಿಗ್ಗಾಂವಿ ನಗರದ ಮಾಜಿ ಸಂಸದ ಮಂಜುನಾಥ ಕುನ್ನೂರ ಅವರ ನಿವಾಸಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್ ಜಾರಕಿಹೊಳಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಸನ್ಮಾನ ಅವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು, ಕಾರ್ಯಕರ್ತರು ಹಾಗೂ ಮುಖಂಡರ ನಿರಂತರ ಪರಿಶ್ರಮದ ಫಲವಾಗಿ ಕಾಂಗ್ರೆಸ್ ತಳ ಮಟ್ಟದಿಂದ ಗಟ್ಟಿಗೊಂಡಿದ್ದು, ಮುಂಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ನಾವೆಲ್ಲರೂ ಶ್ರಮಿಸೋಣ ಎಂದರು.ಈ ಸಂದರ್ಭದಲ್ಲಿ ಚಂದನ ಕುನ್ನೂರ, ಈರಣ್ಣ ಬಡ್ಡಿ, ಮಂಜುನಾಥ ಯಲಿಗಾರ, ಶಿವಾನಂದ ಬಾಗೂರ, ಚಂದ್ರಶೇಖರ ಜುಟ್ಟಲ್, ಅಕ್ಷಯ ಹೊಂಬಾಳಿಮಠ, ಸೈಪು ಹುಲಿಕಟ್ಟಿ, ಸಾಧಿಕ ಮಲ್ಲೂರ, ಶರಣ ಹಲಸೂರು, ಅಜೀಮ್ ಮಿರ್ಜಾ ಹಾಗೂ ಮೊದಲಾದವರು ಇದ್ದರು.