ಸಾರಾಂಶ
ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ನಿವೃತ್ತಿ ಹೊಂದಿದ ಅರುಣ್ ಕುಮಾರ್ ಎಸ್.ವಿ. ಅವರನ್ನು ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಗೌರವಾಭಿನಂದನೆ ಕಾರ್ಯಕ್ರಮವು ನಗರದ ಅಜ್ಜರಕಾಡು ಪುರಭವನ ಮಿನಿಹಾಲ್‌ನಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ನಿವೃತ್ತಿ ಹೊಂದಿದ ಅರುಣ್ ಕುಮಾರ್ ಎಸ್.ವಿ. ಅವರನ್ನು ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಗೌರವಾಭಿನಂದನೆ ಕಾರ್ಯಕ್ರಮವು ನಗರದ ಅಜ್ಜರಕಾಡು ಪುರಭವನ ಮಿನಿಹಾಲ್‌ನಲ್ಲಿ ನಡೆಯಿತು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ಕೆ.ಎಂ.ಎಫ್. ನಿರ್ದೇಶಕ ರವಿರಾಜ್ ಹೆಗ್ಡೆ ಅವರು ಆಗಮಿಸಿದ್ದರು. ಇದೇ ಸಂದರ್ಭ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರಾಗಿ ನೇಮಕಗೊಂಡ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಅಭಿನಂದನಾ ಕಾರ್ಯಕ್ರಮದ ಮುಂಚಿತವಾಗಿ ಸಂಘದ ಸಿಬ್ಬಂದಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಎಂ. ಡಿ. ವಿಶ್ವನಾಥ ನಾಯರ್ ಅವರಿಂದ ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ಕಾರ್ಯಕ್ರಮ ನೆರವೇರಿತು.
ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿದರು. ಉಪಮಹಾಪ್ರಬಂಧಕ ಪ್ರವೀಣ್ ಕುಮಾರ್ ಅವರು ನಿವೃತ್ತ ಅರುಣ್ ಕುಮಾರ್ ಎಸ್.ವಿ. ಅವರ ಅಭಿನಂದನಾ ಭಾಷಣ ಮಾಡಿದರು. ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್ ವಂದಿಸಿದರು.