ಸಾರಾಂಶ
ಭಟ್ಕಳ: ಹಿಂದೂ ಸಂಘಟನೆ ಹಾಗೂ ಬಿಜೆಪಿ ಮುಖಂಡ ಸಚಿನ ಮಹಾಲೆ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಇಲ್ಲಿನ ಬಿಜೆಪಿ ಮಂಡಲದ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಈ ವೇಳೆ ಮಾಜಿ ಶಾಸಕ ಸುನೀಲ ನಾಯ್ಕ ಮಾತನಾಡಿ, ಬಾಲ್ಯದಿಂದಲೂ ಸಚಿನ ಮಹಾಲೆ ಹಿಂದೂ ಸಂಘಟನೆಯ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡು ನಂತರ ಬಿಜೆಪಿಯಲ್ಲಿ ಸಾಕಷ್ಟು ದುಡಿದಿದ್ದಾರೆ. ಭಟ್ಕಳ ಬಿಜೆಪಿ ಮಂಡಲಕ್ಕೆ ಇವರ ಸೇವೆ ಅನನ್ಯವಾಗಿದ್ದು, ಯಾವುದೇ ಚುನಾವಣೆಯಲ್ಲಿ ಪಕ್ಷದ ಪರವಾಗಿ ನಿಂತು ನಿಮ್ಮ ಜತೆಯಲ್ಲಿದ್ದೇನೆ ಎಂದು ಮುಂದೆ ಬಂದು ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದರು ಎಂದರು.
ಊರಿನಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮವಿದ್ದರೂ ಅದಕ್ಕೆ ಬರುವಂತೆ ಕರೆ ಮಾಡಿ ತಿಳಿಸುತ್ತಿದ್ದ ಪ್ರಥಮ ವ್ಯಕ್ತಿ ಎಂದರೆ ಅದು ಸಚಿನ್ ಮಹಾಲೆ ಎಂದರು.ಅವರ ಪತ್ನಿ ಶ್ರೇಯಾ ಮಹಾಲೆ ಅವರು ಕೂಡಾ ಪಕ್ಷದ ಮಹಿಳಾ ಮಂಡಳಿಯ ಸದಸ್ಯೆಯಾಗಿ ಉತ್ತಮ ಕಾರ್ಯ ಮಾಡುತ್ತಾ ಬಂದಿದ್ದಾರೆ. ಪಕ್ಷದ ವತಿಯಿಂದ ಸಚಿನ್ ಅವರ ಕುಟುಂಬಿಕರಿಗೆ ನೆರವಾಗುವ ಕಾರ್ಯ ಮಾಡಬೇಕಾಗಿದೆ ಎಂದರು.
ಬಿಜೆಪಿ ಹಿರಿಯ ಮುಖಂಡ ಹಾಗೂ ಪಶ್ಚಿಮ ಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಬಿಜೆಪಿ ಮಂಡಳದ ಮಾಜಿ ಅಧ್ಯಕ್ಷ ಸುಬ್ರಾಯ ದೇವಾಡಿಗ, ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಈಶ್ವರ ನಾಯ್ಕ ಮಾತನಾಡಿದರು. ಸಚಿನ ಮಹಾಲೆಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಒಂದು ನಿಮಿಷ ಮೌನಾಚಾರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತರಾಮ ಭಟ್ಕಳ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಆಸರಕೇರಿ, ಕೃಷ್ಣಾ ನಾಯ್ಕ ಆಸರಕೇರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ದಿನೇಶ ನಾಯ್ಕ, ರಾಜೇಶ ನಾಯ್ಕ, ಈಶ್ವರ ನಾಯ್ಕ ಮುರುಡೇಶ್ವರ, ದತ್ತಾತ್ರೇಯ ನಾಯ್ಕ, ಪಾಂಡುರಂಗ ನಾಯ್ಕ ಆಸರಕೇರಿ ಮುಂತಾದವರಿದ್ದರು.