ಸಾರಾಂಶ
ದೊಡ್ಡಬಳ್ಳಾಪುರ: ಮಾಜಿ ಮುಖ್ಯಮಂತ್ರಿ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಎಸ್‌ಎಂಕೆ ನುಡಿನಮನ- ಶ್ರದ್ಧಾಂಜಲಿ ಕಾರ್ಯಕ್ರಮ ಮಂಗಳವಾರ ಇಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು, ನಾಡು ಕಂಡ ಧೀಮಂತ ರಾಜಕಾರಣಿಗಳಲ್ಲಿ ಎಸ್.ಎಂ.ಕೃಷ್ಣ ಅಗ್ರಗಣ್ಯರು. ಬಹುಕಾಲ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದುಕೊಂಡು, ನಾಡಿನ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ ಅಧ್ಯಕ್ಷರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುವ ಮೂಲಕ ದೂರಗಾಮಿ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಿದರು ಎಂದರು.
ಕೃಷ್ಣ ಅವರು ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದರೆ ತಪ್ಪಾಗಲಾರದು. ಸಮಕಾಲೀನ ಅವಶ್ಯಕತೆಗಳಿಗೆ ಪೂರಕವಾಗಿ ಅಭಿವೃದ್ದಿಯ ದಿಕ್ಕು ದೆಸೆಯನ್ನು ಬದಲಿಸಿದವರು. ತಮ್ಮ ಗಂಭೀರ ಮಾತು, ಸ್ಪಷ್ಟ ನಡೆಯಿಂದ ಸವಾಲುಗಳನ್ನು ಸರಳವಾಗಿ ನಿಭಾಯಿಸುವ ಕಲೆ ಅವರಿಗೆ ಸಿದ್ದಿಸಿತ್ತು. ದೊಡ್ಡಬಳ್ಳಾಪುರದ ಅಭಿವೃದ್ದಿಗೂ ಅವರ ಕೊಡುಗೆ ಗಣನೀಯವಾಗಿದೆ ಎಂದು ಸ್ಮರಿಸಿದರು.ಗ್ರೆಸ್ ನಗರಾಧ್ಯಕ್ಷ ಕೆ.ಪಿ. ಜಗನ್ನಾಥ್, ಕಸಬಾ ಅಧ್ಯಕ್ಷ ಅಪ್ಪಿ ವೆಂಕಟೇಶ್, ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ನಗರಸಭೆ ಸದಸ್ಯ ಆನಂದ್, ಮಂಜುನಾಥ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಅಂಜನಮೂರ್ತಿ, ಬೆಂ.ಗ್ರಾ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರೇವತಿ ಅನಂತರಾಮ್, ನಗರಸಭೆ ನಾಮನಿರ್ದೇಶಿತ ಸದಸ್ಯರಾದ ವಾಣಿ, ಕಾಂತರಾಜು, ಯುವ ಘಟಕದ ರಾಜೇಶ್ ಜವಾಜಿ, ಗ್ರಾಪಂ ಸದಸ್ಯೆ ನಾಗರತ್ನಮ್ಮ, ಮಮತ ಉಪಸ್ಥಿತರಿದ್ದರು.
ಫೋಟೋ-10ಕೆಡಿಬಿಪಿ1- ದೊಡ್ಡಬಳ್ಳಾಪುರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನುಡಿನಮನ ಕಾರ್ಯಕ್ರಮ ನಡೆಯಿತು.