ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರೀನಿವಾಸ್‌ಪ್ರಸಾದ್ ಶ್ರದ್ಧಾಂಜಲಿ

| Published : Apr 30 2024, 02:00 AM IST

ಸಾರಾಂಶ

ಹಿರಿಯ ರಾಜಕಾರಣಿ ಚಾಮರಾಜನಗರ ಸಂಸದ ಶ್ರೀನಿವಾಸಪ್ರಸಾದ್ ಅವರ ನಿಧನದ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಹಿರಿಯ ರಾಜಕಾರಣಿ ಚಾಮರಾಜನಗರ ಸಂಸದ ಶ್ರೀನಿವಾಸಪ್ರಸಾದ್ ಅವರ ನಿಧನದ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ವಿ.ಶ್ರೀನಿವಾಸಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಕಾಡಾ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಅವಿಭಜಿತ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದರು ಆಗಿದ್ದ ವಿ.ಶ್ರೀನಿವಾಸ್‌ಪ್ರಸಾದ್ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ ೬ ಬಾರಿ ಸಂಸದರಾಗಿ ೨ಬಾರಿ ಶಾಸಕರಾಗಿ, ಕೇಂದ್ರದ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಭಗವಂತ ನೀಡಲಿ ಎಂದರು.ಇದೇ ವೇಳೆ ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹಾದೇವು, ಎಪಿಎಂಸಿ ಸದಸ್ಯ ಎ.ಎಸ್.ಪ್ರದೀಪ್, ಕೆಪಿಸಿಸಿ ಸದಸ್ಯ ಸಯ್ಯದ್ ರಫಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ನಂಪುರ ಗ್ರಾಪಂ ಅಧ್ಯಕ್ಷ ಶೇಖರಪ್ಪ, ಅರುಣ್‌ಕುಮಾರ್, ಕಾಗಲವಾಡಿ ಚಂದ್ರು, ನಸ್ರುಲ್ಲಖಾನ್, ನಾಗವಳ್ಳಿನಾಗಯ್ಯ, ವೀರಭದ್ರಸ್ವಾಮಿ, ಮರಿಸ್ವಾಮಿ, ಜಿಪಂ ಮಾಜಿ ಸದಸ್ಯೆ ಕಾವೇರಿ ಶಿವಕುಮಾರ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮೋಹನ್ (ನಗು), ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ, ನಾಗೇಂದ್ರ. ಆಯೂಬ್ ಖಾನ್, ಅಪ್ಸರ್ ಅಹಮದ್, ರವಿಗೌಡ, ಸೇವಾದಳ ಉಪಾಧ್ಯಕ್ಷ ನಾಗರಾಜು ಸೇರಿದಂತೆ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.