ಇಲ್ಲಿಗೆ ಸಮೀಪದ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಖ್ಯಶಿಕ್ಷಕಿ ಚಂಡೀರ ಲೀಲಾವತಿ ಉತ್ತಪ್ಪ ಅವರನ್ನು ಬೀಳ್ಕೊಡಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮುಖ್ಯಶಿಕ್ಷಕಿ ಚಂಡೀರ ಲೀಲಾವತಿ ಉತ್ತಪ್ಪ ಅವರನ್ನು ಬೀಳ್ಕೊಡಲಾಯಿತು.

ಕಕ್ಕಬ್ಬೆ ಗ್ರಾಮ ಪಂಚಾಯಿತಿಯ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚಂಡೀರ ಲೀಲಾವತಿ ಉತ್ತಪ್ಪ 34 ವರ್ಷ ಸೇವೆಯನ್ನು ಸಲ್ಲಿಸಿ

ನಿವೃತ್ತಿ ಹೊಂದಿದರು.

ಶಾಲಾ ಆಡಳಿತ ಮಂಡಳಿ ವತಿಯಿಂದ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಚಂಡೀರ ಲೀಲಾವತಿ ಉತ್ತಪ್ಪ ಅವರನ್ನು ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ ಶಾಲಾ ಪರವಾಗಿ ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭ ಶಾಲಾ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.