ಗಾಂಧೀಜಿ ಜನ್ಮದಿನದಂದು ಗೌರವ ಸಲ್ಲಿಕೆ :ಟಿ.ಡಿ. ರಾಜೇಗೌಡ

| Published : Oct 05 2025, 01:00 AM IST

ಸಾರಾಂಶ

ಕೊಪ್ಪ, ಮಹಾತ್ಮ ಗಾಂಧೀಜಿ ಅಹಿಂಸಾ ತತ್ವದ ಹೋರಾಟ ಮತ್ತು ರಾಷ್ಟ್ರಕ್ಕೆ ಅವರ ಕೊಡುಗೆಗಳು ಅಪಾರವಾಗಿದೆ. ಅ.೦೨ ಮಹಾತ್ಮ ಗಾಂಧೀಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಿ ಅವರಿಗೆ ಗೌರವ ನೀಡಲಾಗಿದೆ. ಈ ದಿನ ವಿಶ್ವಸಂಸ್ಥೆ ಅಂತರಾಷ್ಟ್ರೀಯ ಅಹಿಂಸಾ ದಿನವೆಂದು ಘೋಷಿಸಿದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

- ಬಿಲಗದ್ದೆಯಲ್ಲಿ ಗಾಂಧಿಜಯಂತಿ ಆಚರಣೆ

ಕನ್ನಡಪ್ರಭ ವಾರ್ತೆ , ಕೊಪ್ಪ

ಮಹಾತ್ಮ ಗಾಂಧೀಜಿ ಅಹಿಂಸಾ ತತ್ವದ ಹೋರಾಟ ಮತ್ತು ರಾಷ್ಟ್ರಕ್ಕೆ ಅವರ ಕೊಡುಗೆಗಳು ಅಪಾರವಾಗಿದೆ. ಅ.೦೨ ಮಹಾತ್ಮ ಗಾಂಧೀಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಿ ಅವರಿಗೆ ಗೌರವ ನೀಡಲಾಗಿದೆ. ಈ ದಿನ ವಿಶ್ವಸಂಸ್ಥೆ ಅಂತರಾಷ್ಟ್ರೀಯ ಅಹಿಂಸಾ ದಿನವೆಂದು ಘೋಷಿಸಿದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು. ತಾಲೂಕಿನ ಶಾನುವಳ್ಳಿ ಪಂಚಾಯಿತಿ ವ್ಯಾಪ್ತಿಯ ಬಿಲಗದ್ದೆ ಮಾರಿಕಾಂಬ ದೇವಸ್ಥಾನದಲ್ಲಿ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ಅಧ್ಯಕ್ಷತೆಯಲ್ಲಿ ನಡೆದ ಗಾಂಧಿ ಜಯಂತಿ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ. ಈ ಇಬ್ಬರು ಮಹಾನ್ ಸ್ವಾತಂತ್ರ್ಯಹೋರಾಟಗಾರರಾಗಿದ್ದು ಈ ಮಹನೀಯರ ಸರಳತೆ ಮತ್ತು ಭ್ರಷ್ಟಾಚಾರ ರಹಿತ ಜೀವನ ಎಲ್ಲರಿಗೂ ಮಾದರಿಯಾಗಬೇಕು ಎಂದರು.ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ ಆಫ್ರಿಕಾದಲ್ಲಿ ವರ್ಣಬೇಧ ನೀತಿ ವಿರುದ್ಧ ಹೋರಾಟ ನಡೆಸಿದ ಮಹಾತ್ಮ ಗಾಂಧೀಜಿ ಭಾರತಕ್ಕೆ ಮರಳಿದ ನಂತರ ತಮ್ಮ ಅಹಿಂಸಾತ್ಮಕ ಪ್ರತಿರೋಧದ ತತ್ವ ಬಳಸಿ ಬ್ರಿಟೀಷ್ ಸಾಮ್ರಾಜ್ಯದ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಪಡೆಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ೧೯೪೮ರ ಜ.೩೦ರಂದು ಮಹಾತ್ಮ ಗಾಂಧಿ ಹತ್ಯೆಯಾದ ದಿನ ಎಲ್ಲಾ ರಾಷ್ಟ್ರಗಳ ಧ್ವಜವನ್ನು ಅರ್ಧಕ್ಕೆ ಇಳಿಸಿ ಅವರಿಗೆ ಗೌರವ ಸಲ್ಲಿಸಲಾಯಿತು. ಅಂತರಾಷ್ಟ್ರೀಯ ಮಟ್ಟದಲ್ಲಿ ಈ ರೀತಿ ಗೌರವ ಪಡೆದ ವ್ಯಕ್ತಿಗಳಲ್ಲಿ ಗಾಂಧೀಜಿ ಮೊದಲಿಗರು ಎಂದರು.ನ.ರಾ. ಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್, ಶೃಂಗೇರಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಭಟ್, ಮುಖಂಡರಾದ ಎ.ಎಸ್. ನಾಗೇಶ್ ಅಸಗೋಡು, ಮಹಮ್ಮದ್ ಇಫ್ತೀಕರ್ ಆದಿಲ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಜಿ. ಶೋಭಿಂತ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್, ಎಪಿಎಂಸಿ ಅಧ್ಯಕ್ಷ ಎಸ್.ಡಿ. ರಾಜೇಂದ್ರ, ಆರ್. ಸದಾಶಿವ, ಸುಂದ್ರೇಶ ಈಚಿಕೆರೆ, ಭಾಸ್ಕರ್ ನಾಯಕ್, ಪ್ರಶಾಂತ್, ಕೆ.ಟಿ.ಮಿತ್ರ, ನವೀನ್ ಕರುವಾನೆ, ಜೇಸುದಾಸ್, ವಿಜಯಾ ನಂದ, ಶಿವಕುಮಾರ್ ಶೆಟ್ಟಿ, ಜಾಯ್, ರವಿಶಂಕರ್, ಸಂತೋಷ್ ಕುಲಾಸೋ ಸೇರಿದಂತೆ ಇತರರಿದ್ದರು.

-- ಕೋಟ್‌--

ನಾನು ಶೃಂಗೇರಿ ಕ್ಷೇತ್ರದ ಶಾಸಕನಾಗಿ ೭ ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರೂ ಕ್ಷೇತ್ರದ ಜನ ತಲೆ ತಗ್ಗಿಸುವಂತಹ ಕೆಲಸ ಹಿಂದೆಂದೂ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ವಿರೋಧ ಪಕ್ಷದವರ ದೂರಿನನ್ವಯ ಲೋಕಾಯುಕ್ತ ಅಧಿಕಾರಿ ಗಳು ನನ್ನ ಮನೆಗೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ತನಿಖೆಗೆ ಸಹಕರಿಸುವುದು ಪ್ರಜ್ಞಾವಂತ ನಾಗರೀಕನಾಗಿ ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ.-ಟಿ.ಡಿ. ರಾಜೇಗೌಡ, ಶಾಸಕರು, ಶೃಂಗೇರಿ ವಿಧಾನಸಭಾ ಕ್ಷೇತ್ರ